ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಎಚ್‌ಡಿಕೆ ಅಭಿವೃದ್ಧಿ ಮೆಚ್ಚಿ ಜೆಡಿಎಸ್‌ನತ್ತ ಜನ’

Last Updated 2 ಜನವರಿ 2018, 6:24 IST
ಅಕ್ಷರ ಗಾತ್ರ

ತಾಂಬಾ: ಎಚ್.ಡಿ.ಕುಮಾರಸ್ವಾಮಿ ಅವರ ಆಡಳಿತದಲ್ಲಿ ಜಾರಿಗೆ ತಂದಿರುವ ಅಭಿವೃದ್ಧಿಪರ ಯೋಜನೆಗಳು, ಮಾಡಿದ ಸಾಧನೆಗಳನ್ನು ಮೆಚ್ಚಿ ಮತಕ್ಷೇತ್ರದ ಜನರು ಜೆಡಿಎಸ್ ಕಡೆ ಹರಿದು ಬರುತ್ತಿದ್ದಾರೆ ಎಂದು ಮಾಜಿ ಸಚಿವ ಎಂ.ಸಿ.ಮನಗೂಳಿ ವಿಶ್ವಾಸ ವ್ಯಕ್ತಪಡಿಸಿದರು.

ಗ್ರಾಮದಲ್ಲಿ ಈಚೆಗೆ ಜೆಡಿಎಸ್ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ವಿವಿಧ ಪಕ್ಷದ 300ಕ್ಕೂ ಅಧಿಕ ಮುಖಂಡರನ್ನು ಬರಮಾಡಿಕೊಂಡು ಮಾತನಾಡಿದ ಅವರು, ಈ ಬಾರಿ ಸರ್ಕಾರ ರಚನೆಯಲ್ಲಿ ಉತ್ತರ ಕರ್ನಾಟಕ ಸಿಂಹಪಾಲು ಕಾರ್ಯನಿರ್ವಹಿಸುತ್ತದೆ. ಈ ಭಾಗದಲ್ಲಿ ಹೆಚ್ಚು ಸಂಘಟಿತಗೊಳ್ಳುತ್ತಿರುವ ಜೆಡಿಎಸ್‌ ಹೆಚ್ಚಿನ ಸ್ಥಾನಗಳಲ್ಲಿ ಗೆದ್ದು, ಅಧಿಕಾರ ಹಿಡಿಯುವುದು ಗ್ಯಾರಂಟಿ ಎಂದರು.

ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅರವಿಂದ ಹಂಗರಗಿ ಮಾತನಾಡಿ, ರಾಜ್ಯದಲ್ಲಿ ಬದಲಾವಣೆ ಪರ್ವ ಆರಂಭವಾಗಿದೆ. ಮುಂಬರುವ ಚುನಾವಣಿಯಲ್ಲಿ ಬಹುಮತದೊಂದಿಗೆ ಜೆ.ಡಿ.ಎಸ್ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಗ್ರಾಮ ಪಂಚಾಯಿತಿ ಸದಸ್ಯ ರೀಯಾಜ ಮೂಮಿನ ಅಧ್ಯಕ್ಷತೆ ವಹಿಸಿದ್ದರು. ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ರೇಷ್ಮಾ ಪಡೇಕನೂರ, ಡಾ.ಮುತ್ತು ಮನಗೂಳಿ, ಅಕ್ಬರ ಮುಲ್ಲಾ ಮಾತನಾಡಿದರು.

ಮಹಮ್ಮದ ದೇವರ, ಸದಾಶಿವ ಗಡ್ಡದ, ಅಪ್ಪಾಸಾಹೇಬ ಅವಟಿ, ವಿಠ್ಠಲ ಮೂಲಿಮನಿ, ಚನ್ನಮಲ್ಲಪ್ಪ ದೇಗಿನಾಳ, ಕುಬೇರ ನಾವದಗಿ, ರಾಜಶೇಖರ ಮಂಜಿ, ಶರಣಪ್ಪ ಗುಬ್ಯಡ, ಭಿರಪ್ಪ ವಗ್ಗಿ, ಮಲ್ಕಪ್ಪ ಹೋರ್ತಿ, ಸತೀಶ ನಾಟೀಕಾರ, ಶಿವು ಮೂಲಿಮನಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT