ದಾವಣಗೆರೆ: ಜನವರಿ 2 ರಂದು ದೇಶದಾದ್ಯಂತ ಖಾಸಗಿ ಆಸ್ಪತ್ರೆಗಳಲ್ಲಿ ಹೊರ ರೋಗಿಗಳ ಸೇವೆ (ಒಪಿಡಿ) ಸ್ಥಗಿತಗೊಳ್ಳುವ ಹಿನ್ನೆಲೆಯಲ್ಲಿ ಈ ಕ್ರಮವನ್ನು ಬೆಂಬಲಿಸಿ ನಗರದಲ್ಲೂ ಖಾಸಗಿ ಆಸ್ಪತ್ರೆಗಳು ಹೊರ ರೋಗಿಗಳ ಸೇವೆ ಬಂದ್ ಮಾಡಲಿವೆ. ತುರ್ತು ಚಿಕಿತ್ಸೆ ವಿಭಾಗಗಳು ಎಂದಿನಂತೆ ಕಾರ್ಯನಿರ್ವಹಿಸಲಿವೆ.

ಶಸ್ತ್ರಚಿಕಿತ್ಸೆ ಹೆರಿಗೆ ಒಳಗೊಂಡಂತೆ ತುರ್ತು ಚಿಕಿತ್ಸೆಗಳು ದೊರಕಲಿವೆ. ಹೊರ ರೋಗಿಗಳ ವಿಭಾಗವೂ ಬೆಳಿಗ್ಗೆಯಿಂದ ಸಂಜೆ 6ರವರೆಗೆ ಮಾತ್ರ ಬಂದ್ ಆಗಲಿದೆ ಎಂದು ಭಾರತೀಯ ವೈದ್ಯಕೀಯ ಸಂಘದ ದಾವಣಗೆರೆ ಘಟಕದ ಪ್ರಧಾನ ಕಾರ್ಯದರ್ಶಿ ಡಾ.ಪ್ರವೀಣ್ ಎಂ. ಅನ್ವೆಕರ್ ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.

ಜಿಲ್ಲೆಯ ಖಾಸಗಿ ಆಸ್ಪತ್ರೆಯ ಜೊತೆಗೆ ನರ್ಸಿಂಗ್ ಹೋಂಗಳು, ಪ್ರಯೋಗಾಲಯಗಳು ಸೋಮವಾರ ಕಾರ್ಯನಿರ್ವಹಿಸುತ್ತಿಲ್ಲ ಎಂದು ಅವರು ಹೇಳಿದ್ದಾರೆ. ಭಾರತೀಯ ವೈದ್ಯಕೀಯ ಪರಿಷತ್ ಬದಲಿಗೆ ರಾಷ್ಟ್ರೀಯ ವೈದ್ಯಕೀಯ ಆಯೋಗ ರಚಿಸಲು ಮುಂದಾಗಿರುವ ಕ್ರಮಕ್ಕೆ ವಿರೋಧ ವ್ಯಕ್ತವಾಗಿದ್ದು, ಇದರ ಬದಲಿಗೆ ವೈದ್ಯಕೀಯ ಪರಿಷತ್ ಅನ್ನೇ ಬಲಪಡಿಸಬೇಕು ಎಂಬುದು ವೈದ್ಯರ ವಾದವಾಗಿದೆ ಎಂದು ಅವರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.