ಲೋಕಸಭೆಯಲ್ಲಿ ಪ್ರತಿಧ್ವನಿಸಿದ ಮಹದಾಯಿ ಸಮಸ್ಯೆ

7

ಲೋಕಸಭೆಯಲ್ಲಿ ಪ್ರತಿಧ್ವನಿಸಿದ ಮಹದಾಯಿ ಸಮಸ್ಯೆ

Published:
Updated:
ಲೋಕಸಭೆಯಲ್ಲಿ ಪ್ರತಿಧ್ವನಿಸಿದ ಮಹದಾಯಿ ಸಮಸ್ಯೆ

ನವದೆಹಲಿ: ಮಹದಾಯಿ ನೀರು ಹಂಚಿಕೆ ವಿವಾದ ಬಗೆಹರಿಸಲು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಮಧ್ಯಪ್ರವೇಶ ಮಾಡಬೇಕು ಎಂದು ಕಾಂಗ್ರೆಸ್‌ ಸಂಸದ ಎಸ್‌.ಪಿ.ಮುದ್ದುಹನುಮೇಗೌಡ ಅವರು ಲೋಕಸಭೆಯಲ್ಲಿ ಮಂಗಳವಾರ ಒತ್ತಾಯಿಸಿದರು.

ಕಲಾಪದ ಶೂನ್ಯವೇಳೆಯಲ್ಲಿ ಮಾತನಾಡಿದ ಅವರು, ‘ಉತ್ತರ ಕರ್ನಾಟಕದ ಜನರಿಗೆ ಕುಡಿಯುವ ನೀರಿನ ಕೊರತೆಯಿದೆ. ಮಹದಾಯಿ ವಿವಾದ ಪ್ರತಿದಿನ ರಾಜಕೀಯ ಆಯಾಮ ಪಡೆದುಕೊಳ್ಳುತ್ತಿದೆ. ಇದರಿಂದ ಜನರ ಸಮಸ್ಯೆ ಹೆಚ್ಚುತ್ತಿದೆ.  ಪ್ರಧಾನಿ ಮೋದಿ ತಕ್ಷಣ ಈ ವಿಷಯದಲ್ಲಿ ಮಧ್ಯಪ್ರವೇಶ ಮಾಡಿ ಸಮಸ್ಯೆ ಬಗೆಹರಿಸಬೇಕು ಎಂದು ಒತ್ತಾಯಿಸಿದರು. ಇದಕ್ಕೆ ಕಾಂಗ್ರೆಸ್‌ ಸಂಸದರು ಧ್ವನಿಗೂಡಿಸಿದರು.

ಇದಕ್ಕೆ ಸಂಸದೀಯ ವ್ಯವಹಾರಗಳ ಸಚಿವ ಅನಂತಕುಮಾರ್‌ ಪ್ರತಿಕ್ರಿಯಿಸಿ, ‘ಈ ಸಮಸ್ಯೆ ಬಗೆಹರಿಸುವ ಕುರಿತು ಗೋವಾ ಮುಖ್ಯಮಂತ್ರಿ ಮನೋಹರ್‌ ಪರಿಕ್ಕರ್‌ ಅವರು ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರಿಗೆ ಈಗಾಗಲೇ ಪತ್ರ ಬರೆದಿದ್ದಾರೆ’ ಎಂದು ಉತ್ತರಿಸಿದರು.

ಈ ಮಾತಿಗೆ ಸಿಟ್ಟಿಗೆದ್ದ ವಿರೋಧ ಪಕ್ಷದ ಮುಖಂಡರು ಆಡಳಿತದಲ್ಲಿ ಇರುವವರನ್ನು ಬಿಟ್ಟು ಮಾಜಿ ಮುಖ್ಯಮಂತ್ರಿಗೆ ಏಕೆ ಪತ್ರ ಬರೆದರು ಎಂದು ಗದ್ದಲ ಎಬ್ಬಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry