ಸೋಮವಾರ, ಆಗಸ್ಟ್ 3, 2020
26 °C

196 ಕಂಪನಿಗಳ ವಿರುದ್ಧ ಕ್ರಮ

ಪಿಟಿಐ Updated:

ಅಕ್ಷರ ಗಾತ್ರ : | |

196 ಕಂಪನಿಗಳ ವಿರುದ್ಧ ಕ್ರಮ

ನವದಹೆಲಿ: ಕಾರ್ಪೊರೇಟ್‌ ಸಾಮಾಜಿಕ ಹೊಣೆಗಾರಿಕೆ (ಸಿಎಸ್‌ಆರ್‌) ನಿಯಮ ಉಲ್ಲಂಘಿಸಿರುವ 196 ಕಂಪನಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಲು ಒಪ್ಪಿಗೆ ನೀಡಲಾಗಿದೆ ಎಂದು ಕಾರ್ಪೊರೇಟ್‌ ವ್ಯವಹಾರಗಳ ಸಚಿವಾಲಯ ತಿಳಿಸಿದೆ.

2014–15ರಲ್ಲಿ ಈ ಕಂಪನಿಗಳು ಸಿಎಸ್‌ಆರ್‌ ನಿಯಮ ಉಲ್ಲಂಘನೆ ಮಾಡಿವೆ ಎಂದು ಕಾರ್ಪೊರೇಟ್‌ ವ್ಯವಹಾರಗಳ ರಾಜ್ಯ ಸಚಿವ ಪಿ.ಪಿ ಚೌಧರಿ ಅವರು ರಾಜ್ಯಸಭೆಗೆ ಮಾಹಿತಿ ನೀಡಿದ್ದಾರೆ.

2013ರ ಕಂಪನಿ ಕಾಯ್ದೆಯ ಅನ್ವಯ, ಲಾಭದಲ್ಲಿರುವ ಉದ್ಯಮಗಳು ತಮ್ಮ ಮೂರು ವರ್ಷಗಳ ಸರಾಸರಿ ನಿವ್ವಳ ಲಾಭದಲ್ಲಿ ಕನಿಷ್ಠ ಶೇ 2 ರಷ್ಟನ್ನು ಸಿಎಸ್ಆರ್ ಚಟುವಟಿಕೆಗಳಿಗೆ ವೆಚ್ಚ ಮಾಡಬೇಕು. ಆದರೆ ಈ ಕಂಪನಿಗಳು ನಿಯಮ ಪಾಲಿಸುವಲ್ಲಿ ವಿಫಲವಾಗಿವೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.