ಬೆಂಗಳೂರು: ಮಂಗಳವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡಂತೆ 24 ಗಂಟೆಗಳಲ್ಲಿ ಕರಾವಳಿ, ಉತ್ತರ ಮತ್ತು ದಕ್ಷಿಣ ಒಳನಾಡುಗಳಲ್ಲಿ ಎಂದಿಗಿಂತ ಕಡಿಮೆ ತಾಪಮಾನ ದಾಖಲಾಗಿದೆ. ಬಾಗಲಕೋಟೆಯಲ್ಲಿ 9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಹವಾಮಾನ ಮುನ್ಸೂಚನೆ: ರಾಜ್ಯದಾದ್ಯಂತ ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.