ಮಧು ಕೋಡಾ ಶಿಕ್ಷೆಗೆ ದೆಹಲಿ ಹೈಕೋರ್ಟ್ ತಡೆ

7

ಮಧು ಕೋಡಾ ಶಿಕ್ಷೆಗೆ ದೆಹಲಿ ಹೈಕೋರ್ಟ್ ತಡೆ

Published:
Updated:
ಮಧು ಕೋಡಾ ಶಿಕ್ಷೆಗೆ ದೆಹಲಿ ಹೈಕೋರ್ಟ್ ತಡೆ

ನವದೆಹಲಿ: ಕಲ್ಲಿದ್ದಲು ಹಗರಣದಲ್ಲಿ ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಮಧು ಕೋಡಾ ಅವರಿಗೆ ಮೂರು ವರ್ಷ ಜೈಲು ಶಿಕ್ಷೆ ಹಾಗೂ ₹25 ಲಕ್ಷ ದಂಡ ವಿಧಿಸಿ ವಿಚಾರಣಾ ನ್ಯಾಯಾಲಯ ನೀಡಿದ್ದ ತೀರ್ಪನ್ನು ದೆಹಲಿ ಹೈಕೋರ್ಟ್ ತಡೆಹಿಡಿದಿದೆ.

ಜನವರಿ 22ರವರೆಗೆ ತೀರ್ಪನ್ನು ತಡೆಹಿಡಿದಿರುವ ದೆಹಲಿ ಹೈಕೋರ್ಟ್, ವಿಚಾರಣಾ ನ್ಯಾಯಾಲಯದ ತೀರ್ಪು ಪ್ರಶ್ನಿಸಿ ಮಧು ಕೋಡಾ ಅವರು ಸಲ್ಲಿಸಿರುವ ಅರ್ಜಿಗೆ ಪ್ರತಿಕ್ರಿಯಿಸುವಂತೆ ಸಿಬಿಐಗೆ ಸೂಚಿಸಿದೆ.

ಅರ್ಜಿ ಇತ್ಯರ್ಥವಾಗುವವರೆಗೆ ಶಿಕ್ಷೆ ತಡೆಹಿಡಿಯಬೇಕು ಹಾಗೂ ಜಾಮೀನು ನೀಡಬೇಕು ಎನ್ನುವ ಕೋಡಾ ಅವರ ಮನವಿ ಮೇರೆಗೆ ನ್ಯಾಯಮೂರ್ತಿ ಅನು ಮಲ್ಹೋತ್ರ ಅವರು ಈ ಆದೇಶ ನೀಡಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry