ಬೆಂಗಳೂರು: ಮಹದೇವಪುರ ಕ್ಷೇತ್ರದ ಕಾಡುಗೋಡಿ ವಾರ್ಡ್ ಪಾಲಿಕೆ ಸದಸ್ಯ ಎಸ್.ಮುನಿಸ್ವಾಮಿ ವಿರುದ್ಧ ನೀಡಿರುವ ದೂರಿಗೆ ಆಕ್ಷೇಪ ವ್ಯಕ್ತಪಡಿಸಿದ ನೂರಾರು ಮಂದಿ ಮಂಗಳವಾರ ಕಾಡುಗೋಡಿ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ, ಪ್ರತಿಭಟಿಸಿದರು.

‘ರಸ್ತೆ ವಿಸ್ತರಣೆ ಕಾಮಗಾರಿ ವಿಚಾರವಾಗಿ ಮುನಿಸ್ವಾಮಿ ಅವರು ಸೀರೆ ಎಳೆದು ಹಾಗೂ ಕಪಾಳಕ್ಕೆ ಹೊಡೆದು ಅಪಮಾನ ಮಾಡಿದ್ದಾರೆ’ ಎಂದು ಆರೋಪಿಸಿ ಮಹಿಳೆಯೊಬ್ಬರು ಕಾಡುಗೋಡಿ ಠಾಣೆಗೆ ದೂರು ನೀಡಿದ್ದರು.

‘ಈ ಕ್ಷೇತ್ರದಲ್ಲಿ ಶಾಸಕ ಅರವಿಂದ ಲಿಂಬಾವಳಿ ಹಾಗೂ ಬಿಜೆಪಿ ಪಾಲಿಕೆ ಸದಸ್ಯರು ಮಾಡುತ್ತಿರುವ ಅಭಿವೃದ್ಧಿ ಕಾರ್ಯಗಳನ್ನು ಸಹಿಸದೆ, ಕಾಂಗ್ರೆಸ್ ಸದಸ್ಯರು ಈ ರೀತಿ ತೇಜೋವಧೆ ಮಾಡುತ್ತಿದ್ದಾರೆ’ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.