ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೈಂಗಿಕ ದೌರ್ಜನ್ಯ: ಪೊಲೀಸ್ ವಶಕ್ಕೆ ಬಾಲಕ

Last Updated 2 ಜನವರಿ 2018, 20:41 IST
ಅಕ್ಷರ ಗಾತ್ರ

ಬೆಂಗಳೂರು: ಏಳು ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ 14 ವರ್ಷದ ಬಾಲಕನನ್ನು ಸಂಪಿಗೆಹಳ್ಳಿ ಪೊಲೀಸರು ವಶಕ್ಕೆ ಪಡೆದು ಬಾಲಮಂದಿರಕ್ಕೆ ಕಳುಹಿಸಿದ್ದಾರೆ.

ಡಿ.28ರ ಬೆಳಿಗ್ಗೆ 10.30ರ ಸುಮಾರಿಗೆ ಬಾಲಕ, ನೆರೆಮನೆಯ ಬಾಲಕಿಯನ್ನು ಮಹಡಿಗೆ ಕರೆದೊಯ್ದಿದ್ದ. ಅಲ್ಲಿ ಆಕೆಯನ್ನು ವಿವಸ್ತ್ರಗೊಳಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದ. ಸಂತ್ರಸ್ತೆಯ ಚೀರಾಟ ಕೇಳಿ ರಕ್ಷಣೆಗೆ ಧಾವಿಸಿದ ಸ್ಥಳೀಯರು, ಬಾಲಕನಿಗೆ ಥಳಿಸಿ ಪೊಲೀಸರ ವಶಕ್ಕೆ ಕೊಟ್ಟಿದ್ದಾರೆ.

‘ಬಾಲಕ ಸಂತ್ರಸ್ತೆಯ ಬೆರಳನ್ನು ರಕ್ತ ಬರುವಂತೆ ಕಚ್ಚಿದ್ದಾನೆ. ಹೀಗಾಗಿ, ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆಯ (ಪೋಕ್ಸೊ) ಜತೆ, ಹಲ್ಲೆ (ಐಪಿಸಿ 323) ಆರೋಪದಡಿಯೂ ಪ್ರಕರಣ ದಾಖಲಿಸಿದ್ದೇವೆ. ಆತನನ್ನು ಬಾಲಮಂದಿರಕ್ಕೆ ಬಿಟ್ಟಿದ್ದೇವೆ’ ಎಂದು ಸಂಪಿಗೆಹಳ್ಳಿ ಪೊಲೀಸರು ತಿಳಿಸಿದ್ದಾರೆ.

‘ಮಗ ಬುದ್ಧಿಮಾಂದ್ಯನಾಗಿದ್ದು, 2011ರಿಂದ ಆತನಿಗೆ ನಿಮ್ಹಾನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸುತ್ತಿದ್ದೇವೆ’ ಎಂದು ಬಾಲಕನ ತಂದೆ ಹೇಳಿದ್ದಾರೆ. ಚಿಕಿತ್ಸೆಗೆ ಸಂಬಂಧಿಸಿದ ದಾಖಲೆಗಳನ್ನು ಒದಗಿಸುವಂತೆ ಅವರಿಗೆ ಸೂಚಿಸಿದ್ದೇವೆ. ವೈದ್ಯರು ಹಾಗೂ ಕಾನೂನು ತಜ್ಞರ ಅಭಿಪ್ರಾಯವನ್ನೂ ಕೋರಿದ್ದೇವೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT