ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಜಯಪುರ–ಹುಬ್ಬಳ್ಳಿ ಹೆದ್ದಾರಿ ತಡೆ, ನರಗುಂದ ಬಂದ್‌; ಟೈರ್‌ಗೆ ಬೆಂಕಿ ಹಚ್ಚಿ ಪ್ರತಿಭಟನೆ: ಕಾಂಗ್ರೆಸ್‌ ವಿರುದ್ಧ ಬಿಜೆಪಿ ಆಕ್ರೋಶ

Last Updated 3 ಜನವರಿ 2018, 6:45 IST
ಅಕ್ಷರ ಗಾತ್ರ

ನರಗುಂದ: ಮಹದಾಯಿ ವಿಷಯದಲ್ಲಿ ಗೋವಾ ಕಾಂಗ್ರೆಸ್‌ನ ನಿಲುವು ಖಂಡಿಸಿ ಬಿಜೆಪಿ ಕಾರ್ಯಕರ್ತರು ಬುಧವಾರ ನರಗಂದ ಬಂದ್‌ಗೆ ಕರೆ ನೀಡಿದ್ದು, ಬೆಳಿಗ್ಗೆಯಿಂದಲೇ ಇಲ್ಲಿನ ರಸ್ತೆಗಳಲ್ಲಿ ಟೈರ್‌ಗೆ ಬೆಂಕಿ ಹಚ್ಚಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. ಬಲವಂತವಾಗಿ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿಸಿದರು.

ಪ್ರತಿಭಟನೆಯಿಂದಾಗಿ ಹುಬ್ಬಳ್ಳಿ–ವಿಜಯಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಸಂಪೂರ್ಣ ಸ್ಥಗಿತಗೊಂಡು ಪ್ರಯಾಣಿಕರು ಪರದಾಡಿದರು.  ಸರ್ಕಾರಿ, ಖಾಸಗಿ ವಾಹನ ಓಡಾಟ ವಿರಳವಾಗಿದೆ.

ನರಗುಂದ ಪಟ್ಟಣದಲ್ಲಿ ಬಿಗಿ ಪೊಲೀಸ್‌ ಬಂದೋಬಸ್ತ್‌ ಕಲ್ಪಿಸಲಾಗಿದೆ. ಮೂವರು  ಡಿವೈಎಸ್ಪಿ, 10 ಸಿಪಿಐ,  14 ಪಿಎಸ್ಐ, 29 ಎಎಸ್ಐ, 4 ಕೆಎಸ್‌ಆರ್‌ಪಿ, 5 ಡಿಆರ್ ತುಕಡಿ, 120 ಪೊಲೀಸರು, ಹಾಗೂ 100 ಜನ ಮಂದಿ ಹೋಂಗಾರ್ಡ್‌ಗಳನ್ನು ಭದ್ರತೆಗೆ ನಿಯೋಜಿಸಲಾಗಿದೆ.

ಬಿಜೆಪಿ ಕಾರ್ಯಕರ್ತರು ಟೈರ್‌ಗೆ ಬೆಂಕಿ ಹಚ್ಚಲು ಮುಂದಾದಾಗ ಪೊಲೀಸರು ಅವಕಾಶ ನಿರಾಕರಿಸಿದರು. ಈ ಸಂದರ್ಭದಲ್ಲಿ ಡಿವೈಎಸ್ಪಿ ಗುರು ಮತ್ತೂರು ಹಾಗೂ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆಯಿತು. ವಿರೋಧ ಮಧ್ಯೆಯೂ ಟೈರ್‌ಗೆ ಬೆಂಕಿ ಹಚ್ಚಿ ಪೊಲೀಸರು ಮತ್ತು ಕಾಂಗ್ರೆಸ್ ವಿರುದ್ಧ ಧಿಕ್ಕಾರ ಕೂಗಿದರು.

‘ಮಹದಾಯಿಗೆ ಬಿಜೆಪಿ  ಸಹಕರಿಸುತ್ತಿದ್ದರೆ, ಅದಕ್ಕೆ ವ್ಯತಿರಿಕ್ತವಾಗಿ ಕಾಂಗ್ರೆಸ್‌ ವರ್ತಿಸುತ್ತಿದೆ. ಇದನ್ನು ವಿರೋಧಿಸಿ ನರಗುಂದ ಬಂದ್‌ ಆಚರಿಸಲಾಗುತ್ತಿದೆ’ ಎಂದು ಬಿಜೆಪಿ ನರಗುಂದ ಮಂಡಲದ ಅಧ್ಯಕ್ಷ ಮಲ್ಲಪ್ಪ ಮೇಟಿ ಹೇಳಿದರು.

‘ಬಂದ್‌ ಅಂಗವಾಗಿ ಪುರಸಭೆಯಿಂದ ಬೃಹತ್‌ ಪ್ರತಿಭಟನಾ ಮೆರವಣಿಗೆ ನಡೆಯಲಿದ್ದು, ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ, ನಂತರ ರೈತ ವೀರಗಲ್ಲಿನ ಬಳಿ ಹಾಕಲಾಗಿರುವ ವೇದಿಕೆಯಲ್ಲಿ ಸಮಾರೋಪಗೊಳ್ಳಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT