ಗೋಣಿಕೊಪ್ಪಲು: ಕೇಂದ್ರ ಸರ್ಕಾರದ ಜನಪರ ಕಾರ್ಯಗಳಿಂದ ಇಂದು ದೇಶದ ಹಲವು ರಾಜ್ಯಗಳಲ್ಲಿ ಬಿಜೆಪಿ ಜಯ ಸಾಧಿಸಲು ಸಾಧ್ಯವಾಗಿದೆ ಎಂದು ಪಕ್ಷದ ತಾಲ್ಲೂಕು ಘಟಕದ ಅಧ್ಯಕ್ಷ ಕುಂಞಂಗಡ ಅರುಣ್ ಬೀಮಯ್ಯ ಹೇಳಿದರು.

ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಸಭಾಂಗಣದಲ್ಲಿ ನಡೆದ ಪಕ್ಷದ ಕಾರ್ಯಕಾರಿಣಿ ಪರಿವರ್ತನಾ ಸಭೆಯಲ್ಲಿ ಮಂಗಳವಾರ ಮಾತನಾಡಿದ ಅವರು, ಮುಂದಿನ ಚುನಾವಣೆಯಲ್ಲಿ ಜನವಿರೋಧಿ ಕಾಂಗ್ರೆಸ್ ಸರ್ಕಾರವನ್ನು ಮಟ್ಟಹಾಕಲು ಕಾರ್ಯಕರ್ತರು ಬೂತ್ ಮಟ್ಟದಲ್ಲಿ ಬಲಿಷ್ಠರಾಗಬೇಕು ಎಂದು ಹೇಳಿದರು.

ಕೊಡಗಿಗೆ ಮಲತಾಯಿ ಧೋರಣೆ ತೋರುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ಧ್ವನಿ ಎತ್ತಬೇಕಾಗಿದೆ. ಜನರ ವಿರೋಧದ ನಡುವೆಯೂ ಪ್ರಾಣಹಾನಿ ಸಂಭವಿಸಿದರೂ ಟಿಪ್ಪು ಜಯಂತಿ ಆಚರಿಸುವ ಮೂಲಕ ಜನರ ಭಾವನೆಗಳನ್ನು ಕೆರಳಿಸಿ ಕೊಡಗಿಗೆ ಅವಮಾನ ಮಾಡಿದ ಸರ್ಕಾರವನ್ನು ಕಿತ್ತೊಗೆಯಬೇಕಾಗಿದೆ ಎಂದರು. ಈ ಬಾರಿಯ ಚುನಾವಣೆಯಲ್ಲಿ ಜಿಲ್ಲೆಯ ಎರಡೂ ಸ್ಥಾನವನ್ನು ಗೆಲ್ಲಿಸುವ ಹೊಣೆ ಪ್ರತಿಯೊಬ್ಬ ಕಾರ್ಯಕರ್ತ ರದ್ದಾಗಿದೆ ಎಂದು ಕರೆ ನೀಡಿದರು.

ಶಾಸಕ ಕೆ.ಜಿ.ಬೋಪಯ್ಯ ಮಾತನಾಡಿ, ಕೇಂದ್ರದ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಳ್ಳದೆ ಕೇವಲ ಪ್ರಧಾನಿಯನ್ನು ದೂರುವುದರಲ್ಲೇ ಕಾಂಗ್ರೆಸ್ನವರು ಕಾಲಕಳೆಯುತ್ತಿದ್ದಾರೆ. ಅಭಿವೃದ್ಧಿ ಕಾರ್ಯಗಳನ್ನು ಕೇವಲ ಮಾಧ್ಯಮಗಳ ಮೂಲಕ ತೋರಿಸ ಲಾಗುತ್ತಿದೆ. ವಾಸ್ತವಾಗಿ ಯಾವುದೇ ಅಭಿವೃದ್ಧಿಯಾಗಿಲ್ಲ ಎಂದು ದೂರಿದರು.

ಪಕ್ಷದ ರಾಜ್ಯ ಕಾರ್ಯದರ್ಶಿ ಮನು ಮುತ್ತಪ್ಪ, ದೇಶದಲ್ಲಿ ಬಿಜೆಪಿ ಅಲೆ ಎದ್ದಿದೆ. ಈಗಾಗಲೆ ಸುಮಾರು 58 ಲಕ್ಷ ಪಕ್ಷದ ಸದಸ್ಯರಿದ್ದಾರೆ. ಜಿಲೆಯಲ್ಲಿ 46 ಸಾವಿರ ಸದಸ್ಯರಿದ್ದಾರೆ. ಪಕ್ಷದ ಮುಂದಿನ ಗುರಿ ಗ್ರಾಮೀಣ ಮಟ್ಟದಲ್ಲಿ ಅಭಿವೃದ್ಧಿಪಡಿಸುವುದಾಗಿದೆ ಎಂದರು. ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಭಾರತೀಶ್ ಮಾತನಾಡಿದರು.

ಮಾಜಿ ಅಧ್ಯಕ್ಷ ಸುಜಾ ಕುಶಾಲಪ್ಪ, ಜಿಲ್ಲಾ ಉಪಾಧ್ಯಕ್ಷ ಪಟ್ರಪಂಡ ರಘು ನಾಣಯ್ಯ, ಮುಖಂಡ ಗಿರೀಶ್ ಗಣಪತಿ, ರಾಜ್ಯ ಕಾರ್ಯಕಾರಿಣಿ ಸಮಿತಿ ಸದಸ್ಯೆ ರೀನಾ ಪ್ರಕಾಶ್, ಜಿಲ್ಲಾ ಕಾರ್ಯದರ್ಶಿ ಬಾಲಚಂದ್ರ ಕಣಗಿ, ರಾಬಿನ್ ದೇವಯ್ಯ, ಎಂ.ಬಿ. ದೇವಯ್ಯ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಸ್ಮಿತಾ ಪ್ರಕಾಶ್, ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಸುವಿನ್ ಗಣಪತಿ, ಲಾಲಾ ಭೀಮಯ್ಯ, ಜಿಲ್ಲಾ ಪಂಚಾಯಿತಿ ಸದಸ್ಯರಾದ ಅಚ್ಚಪಂಡ ಮಹೇಶ್ ಗಣಪತಿ, ಶಶಿ ಸುಬ್ರಮಣಿ, ವಿಜು ಸುಬ್ರಮಣಿ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.