ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಾ ಹಿಂಸಾಚಾರದ ಹಿಂದೆ ಆರ್‌ಎಸ್‌ಎಸ್‌ ಕೈವಾಡ; ಮೋದಿ ಮೌನಿ ಬಾಬಾ: ಕಾಂಗ್ರೆಸ್‌ ಆರೋಪ

Last Updated 3 ಜನವರಿ 2018, 13:59 IST
ಅಕ್ಷರ ಗಾತ್ರ

ನವದೆಹಲಿ: ಮಹಾರಾಷ್ಟ್ರದ ಹಿಂಸಾಚಾರದ ಹಿಂದೆ ಆರ್‌ಎಸ್‌ಎಸ್‌ ಕೈವಾಡವಿದೆ ಎಂದು ಆರೋಪಿಸಿರುವ ಕಾಂಗ್ರೆಸ್‌ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ‘ಮೌನಿ ಬಾಬಾ’ ಎಂದು ಟೀಕಿಸಿದೆ.

ಭೀಮಾ ಕೋರೆಗಾಂವ್‌ನಲ್ಲಿ ದಲಿತರ ಮೇಲೆ ನಡೆದ ಕಲ್ಲು ತೂರಾಟ ವಿರೋಧಿಸಿ ಮಹಾರಾಷ್ಟ್ರದ ವಿವಿಧೆಡೆ ನಡೆಯುತ್ತಿರುವ ಪ್ರತಿಭಟನೆಗಳು ಹಿಂಸಾಚಾರದ ಸ್ವರೂಪ ಪಡೆದಿವೆ. ಈ ಹಿಂಸಾಚಾರದ ಹಿಂದೆ ಆರ್‌ಎಸ್‌ಎಸ್‌ ಕೈವಾಡವಿದೆ ಎಂದು ಕಾಂಗ್ರೆಸ್‌ ಮುಖಂಡ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ.

ಲೋಕಸಭೆಯಲ್ಲಿ ದಲಿತರ ಪ್ರತಿಭಟನೆಯನ್ನು ಪ್ರಸ್ತಾಪಿಸಿದ ಖರ್ಗೆ, ‘ಸಮಾಜವನ್ನು ಒಡೆಯುವ ಉಗ್ರ ಹಿಂದುತ್ವವಾದಿ ಸಂಘಟನೆಯಾದ ಆರ್‌ಎಸ್‌ಎಸ್‌ ಈ ಹಿಂಸಾಚಾರದ ಹಿಂದಿದೆ’ ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT