ಬೆಂಗಳೂರು: ಜಯನಗರ 1ನೇ ಬ್ಲಾಕ್‌ನಲ್ಲಿ ಉದ್ಯಾನವನ ಮತ್ತು ಸಾರ್ವಜನಿಕ ಉದ್ದೇಶಕ್ಕೆ ಮೀಸಲಿಟ್ಟಿದ್ದ ₹200 ಕೋಟಿ ಮೌಲ್ಯದ 2 ಎಕರೆ 39 ಗುಂಟೆ ಜಮೀನನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಡಿನೋಟಿಫೈ ಮಾಡಿದ್ದಾರೆ ಎಂದು ಬಿಜೆಪಿ ಶಾಸಕ ಆರ್. ಅಶೋಕ್ ಆಪಾದಿಸಿದರು.

‘ಅಶೋಕ್ ಧಾರಿವಾಲ ಎಂಬುವವರಿಗೆ ಲಾಭ ಮಾಡಿಕೊಡಲು ಮುಂದಾದ ಸಿದ್ದರಾಮಯ್ಯ, 2014ರ ಜನವರಿ 27ರಂದು ‘ರಿ–ಡೂ’ ಹೆಸರಿನಲ್ಲಿ ಈ ಭೂಮಿಯನ್ನು ಡಿನೋಟಿಫೈ ಮಾಡಿ ಆದೇಶ ಹೊರಡಿಸಿದ್ದಾರೆ’ ಎಂದು ಬುಧವಾರ ಮಾಧ್ಯಮಗೋಷ್ಠಿಯಲ್ಲಿ ದೂರಿದರು.

‘ಜಮೀನು ಡಿನೋಟಿಫೈ ಮಾಡಿಲ್ಲ. ಹೈಕೋರ್ಟ್ ಆದೇಶ ಪಾಲನೆ ಮಾಡಲಾಗಿದೆ’ ಎಂದು ಮುಖ್ಯಮಂತ್ರಿ ಸಚಿವಾಲಯ ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ ಸ್ಪಷ್ಟಪಡಿಸಿದೆ.

ಅಶೋಕ್ ಆರೋಪ: ಲಾಲ್‌ಬಾಗ್ ಸಿದ್ದಾಪುರ (ಈಗ ಜಯನಗರ 1 ನೇ ಬ್ಲಾಕ್‌ಗೆ ಸೇರಿರುವ) ಗ್ರಾಮದ 27/1, 28/4, 28/5, 28/6 ಸರ್ವೆ ನಂಬರ್‌ಗಳಲ್ಲಿನ ಒಟ್ಟು 2ಎಕರೆ 39ಗುಂಟೆ ಭೂಮಿಯನ್ನು ಮೈಸೂರು ಮಹಾರಾಜರ ಕಾಲದಲ್ಲೇ ಸಾರ್ವಜನಿಕ ಉದ್ದೇಶಕ್ಕೆ ಮೀಸಲಿಡಲಾಗಿದೆ.

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಬಡಾವಣೆ ನಿರ್ಮಾಣ ಮಾಡಿದಾಗಲೂ ಈ ಉದ್ದೇಶಕ್ಕೆ ಬಿಡಲಾಗಿದೆ. ಇಲ್ಲಿಯವರೆಗಿನ ಯಾವುದೇ ಮುಖ್ಯಮಂತ್ರಿಯೂ ಈ ಭೂಮಿಯನ್ನು ಡಿನೋಟಿಫೈ ಮಾಡಿರಲಿಲ್ಲ. ಆದರೆ, ಮೈಸೂರಿನವರೇ ಆದ ಸಿದ್ದರಾಮಯ್ಯ ಡಿನೋಡಿಫೈ ಮಾಡಿದ್ದಾರೆ ಎಂದು ಆರೋಪಿಸಿದರು.

ಸಾರ್ವಜನಿಕ ಉದ್ದೇಶಕ್ಕೆ ಮೀಸಲಾದ ಜಮೀನನ್ನು ಅನ್ಯ ಉದ್ದೇಶಕ್ಕೆ ಬಳಸಬಾರದು ಎಂದು ಸುಪ್ರೀಂಕೋರ್ಟ್ ತೀರ್ಪು ನೀಡಿದೆ. ಸಿದ್ದರಾಮಯ್ಯ, ಕೋರ್ಟ್ ತೀರ್ಪು ಉಲ್ಲಂಘಿಸಿದ್ದಾರೆ ಎಂದು ಟೀಕಿಸಿದರು.

ಈ ಬಗ್ಗೆ ಭ್ರಷ್ಟಾಚಾರ ನಿಗ್ರಹ ದಳಕ್ಕೆ ದೂರು ನೀಡಿದರೆ ಪ್ರಯೋಜನವಾಗುವುದಿಲ್ಲ. ಸರ್ಕಾರ ಭೂಮಿಯನ್ನು ವಾಪಸ್ ಪಡೆದು, ಮೂಲ ಉದ್ದೇಶಕ್ಕೆ ಮೀಸಲಿಡಲು ಮುಂದಾಗುವವರೆಗೆ ಬಿಜೆಪಿ ಹೋರಾಟ ನಡೆಸಲಿದೆ ಎಂದು ಅವರು ಹೇಳಿದರು.

ಹೈಕೋರ್ಟ್ ಆದೇಶ ಪಾಲನೆ: ಲಾಲ್‌ಬಾಗ್ ಸಿದ್ದಾಪುರ ಜಮೀನು ಡಿನೋಟಿಫೈ ಮಾಡಿದ್ದಾರೆ ಎಂಬ ಬಿಜೆಪಿ ಆರೋಪದಲ್ಲಿ ಹುರುಳಿಲ್ಲ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷ ಬಿ.ಎಲ್. ಶಂಕರ್ ಹೇಳಿದರು.

ಈ ಪ್ರಕರಣದಲ್ಲಿ ಹೈಕೋರ್ಟ್ ಆದೇಶವನ್ನು ಸರ್ಕಾರ ಪಾಲನೆ ಮಾಡಿದೆ. ವ್ಯಾಜ್ಯ ಸುಪ್ರೀಂಕೋರ್ಟ್‌ನಲ್ಲಿದೆ. ಇತ್ತೀಚೆಗೆ ನಗರಕ್ಕೆ ಬಂದಿದ್ದ ಅಮಿತ್ ಷಾ ಬಿಜೆಪಿಯವರಿಗೆ ಸೂಚನೆ ನೀಡಿದ್ದರು. ಅವರನ್ನು ಮೆಚ್ಚಿಸಲು ಮುಂದಾಗಿರುವ ಅಶೋಕ್, ಕೆಲವು ದಾಖಲೆಗಳನ್ನಿಟ್ಟುಕೊಂಡು ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದರು.

ಹೈಕೋರ್ಟ್ ಆದೇಶ ಪಾಲನೆ: ಬಿ.ಎಲ್. ಶಂಕರ್
ಲಾಲ್‌ಬಾಗ್ ಸಿದ್ದಾಪುರ ಜಮೀನು ಡಿನೋಟಿಫೈ ಮಾಡಿದ್ದಾರೆ ಎಂಬ ಬಿಜೆಪಿ ಆರೋಪದಲ್ಲಿ ಹುರುಳಿಲ್ಲ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷ ಬಿ.ಎಲ್. ಶಂಕರ್ ಹೇಳಿದರು.

ರಿಯಲ್ ಎಸ್ಟೇಟ್ ಏಜೆಂಟ್ ಅಶೋಕ್ ಧಾರಿವಾಲಗಾಗಿ ಸಿದ್ದರಾಮಯ್ಯ ಡಿನೋಟಿಫೈ ಮಾಡಿದ್ದಾರೆ. ಇದರಲ್ಲಿ ಭಾರಿ ಅವ್ಯವಹಾರ ನಡೆದಿದೆ.
–ಆರ್. ಅಶೋಕ್, ಬಿಜೆಪಿ ಶಾಸಕ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.