ನ್ಯೂಜಿಲೆಂಡ್ ತಂಡದ ಕಾಲಿನ್ ಮನ್ರೊ ಬುಧವಾರ ಕ್ರಿಕೆಟ್ ಇತಿಹಾಸದ ಪುಟಗಳಲ್ಲಿ ತಮ್ಮ ಹೆಸರನ್ನು ಸುವರ್ಣಾಕ್ಷರಗಳಲ್ಲಿ ಅಚ್ಚೊತ್ತಿದರು. ಅವರು ಟ್ವೆಂಟಿ–20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಶತಕ (3) ಗಳಿಸಿದ ಮೊದಲ ಬ್ಯಾಟ್ಸ್‌ಮನ್ ಎಂಬ ಹಿರಿಮೆಯನ್ನು ತಮ್ಮದಾಗಿಸಿಕೊಂಡರು. ವೆಸ್ಟ್ ಇಂಡೀಸ್ ವಿರುದ್ಧ ಬುಧವಾರ ನಡೆದ ಪಂದ್ಯದಲ್ಲಿ ಅವರಿಂದ ಈ ಸಾಧನೆ ಮೂಡಿಬಂದಿತು.