ಸೋಮವಾರ, ಜೂಲೈ 6, 2020
21 °C

ಮುಂಬೈನಲ್ಲಿ ಮತ್ತೊಂದು ಅಗ್ನಿ ಅವಘಡ: ಇಬ್ಬರು ಮಕ್ಕಳು ಸೇರಿ ನಾಲ್ಕು ಮಂದಿ ಸಾವು

ಏಜೆನ್ಸಿಸ್‌ Updated:

ಅಕ್ಷರ ಗಾತ್ರ : | |

ಮುಂಬೈನಲ್ಲಿ ಮತ್ತೊಂದು ಅಗ್ನಿ ಅವಘಡ: ಇಬ್ಬರು ಮಕ್ಕಳು ಸೇರಿ ನಾಲ್ಕು ಮಂದಿ ಸಾವು

ಮುಂಬೈ: ಇಬ್ಬರು ಮಕ್ಕಳು ಸೇರಿ ಕುಟುಂಬದ ನಾಲ್ವರು ಸದಸ್ಯರು ಬೆಂಕಿಗೆ ಆಹುತಿಯಾಗಿರುವ ಘಟನೆ ಅಂಧೇರಿಯ ಮರೋಲ್‌ನಲ್ಲಿ ಗುರುವಾರ ನಸುಕಿನಲ್ಲಿ ನಡೆದಿದೆ.

ಬೋಹ್ರಿ ಕಾಲೋನಿಯ ಮಮೂನ್‌ ಮನ್ಜಿಲ್‌ ಕಟ್ಟದಲ್ಲಿ ಸಂಭವಿಸಿರುವ ಅಗ್ನಿ ಅವಘಡದಲ್ಲಿ ನಾಲ್ಕು ಮಂದಿ ಸಾವಿಗೀಡಾಗಿದ್ದು, ಐದಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

ಸಕೀನಾ(14), ಮೋಹಿನ್‌(10), ತಸ್ಲಿಮ್‌(42) ಹಾಗೂ ದಾವೂದ್(80) ಮೃತರು. ಸಾವಿಗೀಡಾದ ಕುಟುಂಬ ಕಟ್ಟಡದ ಮೂರನೇ ಮಹಡಿಯ ನಿವಾಸದಲ್ಲಿದ್ದರು ಎಂದು ತಿಳಿದು ಬಂದಿದೆ.

ಮನೆಯೊಳಗೆ ಶಾರ್ಟ್‌ ಸರ್ಕೀಟ್‌ನಿಂದಾಗಿ ನಾಲ್ಕೂ ದಿಕ್ಕಿನಲ್ಲಿ ಬೆಂಕಿ ಆವರಿಸಿ ಕುಟುಂಬದ ಸದಸ್ಯರು ಹೊರ ಬರಲಾರದೆ ಬೆಂಕಿಗೆ ಆಹುತಿಯಾಗಿರಬಹುದು ಎಂದು ಅಗ್ನಿಶಾಮಕ ಇಲಾಖೆ ಅಧಿಕಾರಿಗಳು ಶಂಕಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.