ಕರಾವಳಿ ಭದ್ರತಾ ಪಡೆಗೆ ಆಯ್ಕೆ: ತರಬೇತಿಗೆ ಅರ್ಜಿ

7

ಕರಾವಳಿ ಭದ್ರತಾ ಪಡೆಗೆ ಆಯ್ಕೆ: ತರಬೇತಿಗೆ ಅರ್ಜಿ

Published:
Updated:

ಬೀದರ್: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು 2017-18ನೇ ಸಾಲಿಗೆ ಭಾರತೀಯ ಕರಾವಳಿ ಭದ್ರತಾ ಪಡೆಗೆ ಸೇರ ಬಯಸುವ ಹಿಂದುಳಿದ ವರ್ಗಗಳ ಅರ್ಹ ಪುರುಷ ಅಭ್ಯರ್ಥಿಗಳಿಗೆ ಪೂರ್ವ ಸಿದ್ಧತೆ ಬಗೆಗೆ ವೃತ್ತಿ ಮಾರ್ಗದರ್ಶನ ಮತ್ತು ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಉಚಿತ ಊಟ ಮತ್ತು ವಸತಿ ಸೌಲಭ್ಯದೊಂದಿಗೆ ತರಬೇತಿ ನೀಡಲಾಗುವುದು. ಹಿಂದುಳಿದ ವರ್ಗಗಳಾದ ಪ್ರವರ್ಗ-1, 2(ಎ), 3(ಎ) ಹಾಗೂ 3(ಬಿ)ಗೆ ಸೇರಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಜ.10ರ ಸಂಜೆ 5.30ರ ವರೆಗೆ ಅವಕಾಶವಿದೆ. ಹೆಚ್ಚಿನ ಮಾಹಿತಿಗೆ ಇಲಾಖೆಯ ವೆಬ್‌ಸೈಟ್: www.backwardclasses.kar.nic.in ಅಥವಾ ದೂರವಾಣಿ ಸಂಖ್ಯೆ:080-65970004, ಜಿಲ್ಲಾ ಕಚೇರಿ: 08482-233148ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry