ಬುಧವಾರ, ಆಗಸ್ಟ್ 5, 2020
21 °C

ಕೇರಳ ಮಾದರಿಯಲ್ಲಿ ರಾಜ್ಯದಲ್ಲಿ ಹಿಂದೂ ಕಾರ್ಯಕರ್ತರ ಕೊಲೆ; ದೀಪಕ್ ರಾವ್ ಕೊಲೆಯಲ್ಲಿ ಸಚಿವ ರಮಾನಾಥ್ ರೈ ಕೈವಾಡ: ಯಡಿಯೂರಪ್ಪ ಆರೋಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೇರಳ ಮಾದರಿಯಲ್ಲಿ ರಾಜ್ಯದಲ್ಲಿ ಹಿಂದೂ ಕಾರ್ಯಕರ್ತರ ಕೊಲೆ; ದೀಪಕ್ ರಾವ್ ಕೊಲೆಯಲ್ಲಿ ಸಚಿವ ರಮಾನಾಥ್ ರೈ ಕೈವಾಡ: ಯಡಿಯೂರಪ್ಪ ಆರೋಪ

ಹೂವಿನಹಡಗಲಿ: ಮಂಗಳೂರಿನಲ್ಲಿ ನಡೆದ ದೀಪಕ್ ರಾವ್ ಕೊಲೆಯಲ್ಲಿ ಅಲ್ಲಿನ ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ್ ರೈ ಅವರ ಕೈವಾಡವಿದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಆರೋಪ ಮಾಡಿದರು.

ಬಿಜೆಪಿ ಪರಿವರ್ತನಾ ಯಾತ್ರೆಗೂ ಮುನ್ನ ಗುರುವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಹದಗೆಟ್ಟಿದೆ. ದೀಪಕ್ ರಾವ್ ಶವವನ್ನು ಅವರ ಮನೆಯವರಿಗೆ ಒಪ್ಪಿಸೋದು ಬಿಟ್ಟು, ಕಾಂಗ್ರೆಸ್ ನವರೇ ಮನೆಗೆ ತಲುಪಿಸಿದ್ದಾರೆ. ಮುಖ್ಯಮಂತ್ರಿ ಕೂಡ ಇದಕ್ಕೆ ಕಾರಣರು. ಕೇರಳ ಮಾದರಿಯಲ್ಲಿ ರಾಜ್ಯದಲ್ಲಿ ಹಿಂದೂ ಕಾರ್ಯಕರ್ತರನ್ನು ಕೊಲೆ ಮಾಡಲಾಗುತ್ತಿದೆ. ಇದರ ಬಗ್ಗೆ ಶೀಘ್ರದಲ್ಲೇ ಚರ್ಚಿಸಿ ಹೋರಾಟ ನಡೆಸಲಾಗುವುದು ಎಂದು ಹೇಳಿದರು.

ಯಾರೇ ಪ್ರಚೋದನಕಾರಿ ಭಾಷಣ ಮಾಡಿದರೆ ಅಂತಹವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಕಾನೂನು ಸುವ್ಯವಸ್ಥೆ ಹಾಳಾಗದಂತೆ ನೋಡಿಕೊಳ್ಳಬೇಕು‌. ಆದರೆ, ನೆಪ ಹೇಳುವುದು ಸರಿಯಲ್ಲ. ಇಂತಹ ಬೇಜವಾಬ್ದಾರಿ ಮುಖ್ಯಮಂತ್ರಿ ದೇಶದಲ್ಲಿ ಎಲ್ಲೂ ಇಲ್ಲ ಎಂದು ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು.

ನೂರು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗಿದೆ. ಎಲ್ಲಿ ಹೆಚ್ಚಿನ ಟಿಕೆಟ್ ಆಕಾಂಕ್ಷಿಗಳಿದ್ದಾರೆ ಅಂತಹ ಕಡೆ ಜನಾಭಿಪ್ರಾಯ ಪಡೆದು ಅಂತಿಮಗೊಳಿಸಲಾಗುವುದು ಎಂದರು.

ಕೂಡ್ಲಿಗಿ ಶಾಸಕ ನಾಗೇಂದ್ರ ಅವರು ಯಾವ ಪಕ್ಷಕ್ಕೆ ಬೇಕಾದರೂ ಹೋಗಬಹುದು. ಅದಕ್ಕೆ ಅವರು ಸ್ವತಂತ್ರರು. ನಾನು ಅವರ ಸಂಪರ್ಕದಲ್ಲಿಲ್ಲ ಎಂದು ಹೇಳಿದರು.

ಬೆಂಗಳೂರಿನ ಜಯನಗರದಲ್ಲಿ ಉದ್ಯಾನವನಕ್ಕೆ ಮೀಸಲಿಟ್ಟಿದ್ದ 2.39 ಎಕರೆ ಜಾಗವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಡಿನೋಟಿಫಿಕೇಶನ್ ಮಾಡಿದ್ದು ಸತ್ಯ. ಈ ಬಗ್ಗೆ ವಾರದಲ್ಲಿ ಆರೋಪ ಸಿದ್ಧಪಡಿಸಿ ಸಂಬಂಧಪಟ್ಟವರಿಗೆ ಸಲ್ಲಿಸಲಾಗುವುದು ಎಂದು ಹೇಳಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.