ಶನಿವಾರ, ಜೂಲೈ 11, 2020
29 °C

ವಿಜ್ಞಾನ ಕೇಂದ್ರ: ವಿವಿಧ ಸ್ಪರ್ಧೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಲಬುರ್ಗಿ: ಇಲ್ಲಿನ ಜಿಲ್ಲಾ ವಿಜ್ಞಾನ ಕೇಂದ್ರದ 34ನೇ ವಾರ್ಷಿಕೋತ್ಸವ ಅಂಗವಾಗಿ ಜ.6ರಿಂದ 12ರ ವರೆಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ ಎಂದು ಕೇಂದ್ರದ ಅಧಿಕಾರಿ ಸಿ.ಎನ್.ಲಕ್ಷ್ಮಿನಾರಾಯಣ ತಿಳಿಸಿದ್ದಾರೆ.

ಜ.6ರಂದು ಬೆಳಿಗ್ಗೆ 11 ಗಂಟೆಗೆ ವಾರ್ಷಿಕೋತ್ಸವದ ಉದ್ಘಾಟನಾ ಸಮಾರಂಭ ಜರುಗಲಿದೆ. ಅಂದು ಮಧ್ಯಾಹ್ನ 2.30 ಗಂಟೆಗೆ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಜಿಲ್ಲಾ ಮಟ್ಟದ ಅಂತಿಮ ಸುತ್ತಿನ ವಿಜ್ಞಾನ ರಸಪ್ರಶ್ನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಜ.7ರಂದು ಸಂಜೆ 4 ಗಂಟೆಗೆ ಕುಟುಂಬದ ಸದಸ್ಯರಿಗಾಗಿ ಮುಕ್ತ ರಸಪ್ರಶ್ನೆ ಹಾಗೂ ಜ.8ರಂದು ಸಂಜೆ 4 ಗಂಟೆಗೆ ವಿದ್ಯಾರ್ಥಿಗಳು ಮತ್ತು ವೀಕ್ಷಕರಿಗಾಗಿ ಕೇಂದ್ರದ ಪ್ರದರ್ಶಿಕೆಗಳ ಕುರಿತು ಲಿಖಿತ ರಸಪ್ರಶ್ನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಜ.9ರಂದು ಬೆಳಿಗ್ಗೆ 11 ಗಂಟೆಗೆ 1 ರಿಂದ 5ನೇ ತರಗತಿ ಮಕ್ಕಳಿಗೆ ‘ಪರಿಸರ’ ಕುರಿತು, 5ರಿಂದ 7ನೇ ತರಗತಿ ಮಕ್ಕಳಿಗೆ ‘ಬಾಹ್ಯಾಕಾಶ ಅನ್ವೇಷಣೆ’ ಹಾಗೂ 8 ರಿಂದ 10ನೇ ತರಗತಿಯ ವಿದ್ಯಾರ್ಥಿಗಳಿಗೆ ‘ಶಕ್ತಿಯ ಸಂಪನ್ಮೂಲಗಳು’ ಕುರಿತು ಚಿತ್ರಕಲಾ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ.

ಜ.10ರಂದು ಬೆಳಿಗ್ಗೆ 11 ಗಂಟೆಗೆ ವಿಜ್ಞಾನ ಶಿಕ್ಷಕರು ಹಾಗೂ ವಿದ್ಯಾರ್ಥಿಗಳಿಗಾಗಿ ಭೌತವಿಜ್ಞಾನ ಮತ್ತು ರಸಾಯನವಿಜ್ಞಾನ ಕುರಿತು ಕಮ್ಮಟ ಏರ್ಪಡಿಸಲಾಗಿದೆ. ಜ.11ರಂದು ಬೆಳಿಗ್ಗೆ 11 ಗಂಟೆಗೆ ‘ಭಾರತದ ಬಾಹ್ಯಾಕಾಶ ಕಾರ್ಯಕ್ರಮಗಳು’ ಕುರಿತು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಭಾಷಣ ಸ್ಪರ್ಧೆ ಏರ್ಪಡಿಸಲಾಗಿದೆ.

ಜ.12ರಂದು ಬೆಳಿಗ್ಗೆ 11 ಗಂಟೆಗೆ ಜನಪ್ರಿಯ ವಿಜ್ಞಾನ ಉಪನ್ಯಾಸ, ಬಹುಮಾನ ವಿತರಣೆ, ಸಮಾರೋಪ ಸಮಾರಂಭ, ಮುಕ್ತ ರಸಪ್ರಶ್ನೆ ಕಾರ್ಯ ಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

ಮಾಹಿತಿಗೆ ಜಿಲ್ಲಾ ವಿಜ್ಞಾನ ಕೇಂದ್ರ, ದೂ.ಸಂ: 08472-270608 ಸಂಪರ್ಕಿಸಬಹುದು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.