ಶನಿವಾರ, ಜೂಲೈ 11, 2020
29 °C

ಒಂದೇ ದಿನ 86 ಹಂದಿ ಸೆರೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಬ್ಬಳ್ಳಿ: ಕೆಲ ದಿನಗಳಿಂದ ಸ್ಥಗಿತಗೊಂಡಿದ್ದ ಹಂದಿ ಹಿಡಿಯುವ ಕಾರ್ಯಾಚರಣೆ ಮತ್ತೆ ಆರಂಭವಾಗಿದ್ದು, ಬುಧವಾರ ಒಂದೇ ದಿನ 86 ಹಂದಿಗಳನ್ನು ಹಿಡಿದು ಸಾಗಿಸಲಾಗಿದೆ.

ಗೋಕುಲ ರಸ್ತೆ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಬರುವ ನೆಹರು ನಗರ, ಆನಂದ ನಗರ, ಪ್ರಿಯದರ್ಶಿನಿ ಕಾಲೊನಿ, ಕೋಟಿ ಲಿಂಗೇಶ್ವರ ನಗರ, ರಾಮಲಿಂಗೇಶ್ವರ ನಗರಗಳಲ್ಲಿ ಕಾರ್ಯಾಚರಣೆ ನಡೆಯಿತು.

‘ನಗರದಲ್ಲಿ ಹಂದಿಗಳ ಹಾವಳಿ ಹೆಚ್ಚಾಗಿದ್ದರಿಂದ ಜನರಿಂದ ಸಾಕಷ್ಟು ದೂರುಗಳು ಬಂದಿದ್ದವು. ಆದ್ದರಿಂದ ಕಾರ್ಯಾಚರಣೆ ಮತ್ತೆ ಆರಂಭಿಸಿದ್ದೇವೆ. ತಮಿಳುನಾಡಿನಿಂದ ತಂಡ ಬಂದಿದ್ದು, ಪೊಲೀಸರ ಲಭ್ಯತೆಯ ಆಧಾರದ ಮೇಲೆ ಇನ್ನೂ ಕೆಲ ದಿನ ಕಾರ್ಯಾಚರಣೆ ಮುಂದುವರಿಯಲಿದೆ’ ಎಂದು ಪಾಲಿಕೆ ಸಹಾಯಕ ಆರೋಗ್ಯಾಧಿಕಾರಿ ರವಿ ಸಾಲಿಗೌಡರ ‘ಪ್ರಜಾವಾಣಿ’ಗೆ ತಿಳಿಸಿದರು.

ಅಪಘಾತ: ವೃದ್ಧೆ ಸಾವು

ಹುಬ್ಬಳ್ಳಿ: ಇಲ್ಲಿನ ಕೋಳಿ ಬಜಾರ್ ಕ್ರಾಸ್ ಬಳಿ ರಸ್ತೆ ದಾಟುತ್ತಿದ್ದ ವೃದ್ಧೆ ಬೀಬಿಜಾನ್ ರೆಹಮಾನ್ ಘಟವಾಲೆ (65) ಎಂಬುವರಿಗೆ ವಾಯವ್ಯ ರಸ್ತೆ ಸಾರಿಗೆ ಸಂಸ್ಥೆಯ ಸಿಟಿ ಬಸ್ ಡಿಕ್ಕಿ ಹೊಡೆದಿದ್ದರಿಂದ ಮೃತಪಟ್ಟಿದ್ದಾರೆ.

ಬಾನಿ ಓಣಿ ನಿವಾಸಿಯಾದ ಘಟವಾಲೆ ಅವರು ಸಂಜೆ 4.30ರ ಸುಮಾರಿಗೆ ರಸ್ತೆ ದಾಟುವಾಗ, ಬಸ್‌ ಡಿಕ್ಕಿ ಹೊಡೆದಿದೆ. ತೀವ್ರವಾಗಿ ಗಾಯಗೊಂಡ ಅವರು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಕೊನೆಯುಸಿರೆಳೆದರು ಘಟನೆ ಸಂಬಂಧ ಪ್ರಕರಣ ದಾಖಲಿಸಿ ಕೊಳ್ಳಲಾಗಿದೆ ಎಂದು ದಕ್ಷಿಣ ಸಂಚಾರ ಠಾಣೆ ಇನ್‌ಸ್ಪೆಕ್ಟರ್ ಅಲಿ ಶೇಕ್ ತಿಳಿಸಿದರು.

ಲಾರಿ ಡಿಕ್ಕಿ: ಬೈಕ್ ಸವಾರ ಸಾವು

ಧಾರವಾಡ: ಪುಣೆ–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಿಂಗನಳ್ಳಿ ಕ್ರಾಸ್ ಬಳಿ ಟಾಟಾ ಮಿನಿ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೆಂಗಳೂರು ಮೂಲದ ಬೈಕ್ ಸವಾರ ಅಜು ರೊಹೆಬ್ ಖಾನ್ (21) ಮೃತಪಟ್ಟಿದ್ದಾರೆ.

ಅಜು ರೊಹೆಬ್ ಖಾನ್ ಬೆಂಗಳೂರಿನಿಂದ ಬೆಳಗಾವಿ ಕಡೆ ಹೊರಟಿದ್ದರು. ಈ ವೇಳೆ ಸಿಂಗನಹಳ್ಳಿ ಕ್ರಾಸ್‌ ಬಳಿ ತೆರ ಳುತ್ತಿದ್ದ ಟಾಟಾ ಮಿನಿ ಲಾರಿಗೆ ಬೈಕ್ ಡಿಕ್ಕಿ ಹೊಡೆದಿದೆ. ಈ ವೇಳೆ ತಲೆಗೆ ತೀವ್ರ ಪೆಟ್ಟುಬಿದ್ದು ಸ್ಥಳದಲ್ಲಿಯೇ ಮೃತಪಟ್ಟಿ ದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣ ಠಾಣೆಯಲ್ಲಿ ದಾಖಲಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.