ಹಾವೇರಿ: ಮಾಧ್ಯಮ ಪಟ್ಟಿಯಲ್ಲಿರುವ ಪ್ರಾದೇಶಿಕ ಮತ್ತು ಜಿಲ್ಲಾ ಮಟ್ಟದ ಪತ್ರಿಕೆಗಳು ಹಾಗೂ ತಾಲ್ಲೂಕು ಮಟ್ಟದ ವಿದ್ಯುನ್ಮಾನ ಮಾಧ್ಯಮದಲ್ಲಿ ಕಾರ್ಯನಿರ್ವಹಿಸುವ ಗ್ರಾಮೀಣ ಪತ್ರಕರ್ತರಿಗೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್‌ಗಳಲ್ಲಿ ಜಿಲ್ಲೆಯೊಳಗೆ ಪ್ರಯಾಣಿಸಲು ಉಚಿತ ಬಸ್ ಪಾಸ್ ನೀಡಲಿದ್ದು, ಅರ್ಜಿ ಸಲ್ಲಿಕೆ ಅವಧಿಯನ್ನು ಜನವರಿ 8ರ ವರೆಗೆ ವಿಸ್ತರಿಸಲಾಗಿದೆ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ತಿಳಿಸಿದೆ.

ಪೂರ್ಣಾವಧಿ ಪತ್ರಕರ್ತರಾಗಿ ಕನಿಷ್ಠ ಎರಡು ವರ್ಷದ ಸೇವಾನುಭವದ ಪ್ರಮಾಣಪತ್ರ, ನೇಮಕಾತಿ ಆದೇಶ, ವೇತನ ರಸೀದಿ, ಬ್ಯಾಂಕ್ ಖಾತೆ ವಿವರವನ್ನು ಅರ್ಜಿಯೊಂದಿಗೆ ಲಗತ್ತಿಸಬೇಕು.

ಭರ್ತಿ ಮಾಡಿದ ಅರ್ಜಿಯನ್ನು ಜಿಲ್ಲಾ ವಾರ್ತಾಧಿಕಾರಿಗಳ ಕಚೇರಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ವಾರ್ತಾ ಭವನ, ವಿದ್ಯಾನಗರ, ಹಾವೇರಿ ಈ ಕಚೇರಿಗೆ ಸಲ್ಲಿಸಲು ಕೋರಲಾಗಿದೆ. ಹೆಚ್ಚಿನ ಮಾಹಿತಿಗೆ ಕಚೇರಿಯನ್ನು ಸಂಪರ್ಕಿಸಬಹುದು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.