ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೈತರ ಬೆಳೆಗೆ ವೈಜ್ಞಾನಿಕ ಬೆಲೆ ನಿಗದಿ:ಒತ್ತಾಯ

ನವದೆಹಲಿಯ ಭಾರತೀಯ ಕೃಷಿಕ ಸಮಾಜದ ವತಿಯಿಂದ ಅಭಿನಂದನಾ ಸಮಾರಂಭ
Last Updated 4 ಜನವರಿ 2018, 10:20 IST
ಅಕ್ಷರ ಗಾತ್ರ

ವಿಜಯಪುರ : ರೈತರು ಬೆಳೆದ ಬೆಳೆಗಳಿಗೆ ನ್ಯಾಯ ಸಮ್ಮತವಾದ ವೈಜ್ಞಾನಿಕ ಬೆಲೆಯನ್ನು ನಿಗದಿ ಪಡಿಸುವ ವ್ಯವಸ್ಥೆಯನ್ನು ಸರ್ಕಾರ ಮಾಡಬೇಕು ಎಂದು ಜೆಡಿಎಸ್ ನಾಯಕ ನಿಸರ್ಗ ಡಾ.ಎಲ್.ಎನ್.ನಾರಾಯಣಸ್ವಾಮಿ ಹೇಳಿದರು.

ಇಲ್ಲಿ ನವದೆಹಲಿಯ ಭಾರತೀಯ ಕೃಷಿಕ ಸಮಾಜದ ವತಿಯಿಂದ ಅಭಿನಂದನೆ ಸ್ವೀಕರಿಸಿ ಅವರು ಮಾತನಾಡಿದರು.

1,500 ಅಡಿ ಕೊಳವೆಬಾವಿಗಳ ಮೂಲಕ ನೀರು ತೆಗೆದು ಬೆಳೆಗಳನ್ನು ಬೆಳೆಯುತ್ತಿರುವ ರೈತರಿಗೆ ವೈಜ್ಞಾನಿಕವಾದ ಬೆಲೆಗಳು ಸಿಗದೆ, ಅವರು ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿದೆ ಎಂದರು.

ಬ್ಯಾಂಕುಗಳಿಂದ ಕೃಷಿ ಚಟುವಟಿಕೆಗಳಿಗಾಗಿ ಪಡೆದಿರುವ ಸಾಲಗಳನ್ನು ಮರುಪಾವತಿ ಮಾಡಲು ಸಾಧ್ಯವಾಗದೆ ಸಾಲಗಾರರಾಗುತ್ತಿದ್ದಾರೆ ಎಂದು ಅಭಿಪ್ರಾಯಪಟ್ಟರು.

ಬಯಲು ಸೀಮೆ ಭಾಗದಲ್ಲಿನ ರೈತರು ನೀರಿಗಾಗಿ ಸತತ ನಾಲ್ಕು ದಶಕಗಳಿಂದ ಹೋರಾಟ ಮಾಡುತ್ತಿದ್ದರು. ಕೇವಲ ಯೋಜನೆಗಳ ಹೆಸರು ಹೇಳಿಕೊಂಡು ಕಾಲಹರಣ ಮಾಡುತ್ತಿರುವ ಸರ್ಕಾರಗಳು ಈ ಭಾಗದಲ್ಲಿನ ರೈತರನ್ನು ಇಕ್ಕಟ್ಟಿನ ಪರಿಸ್ಥಿತಿಗೆ ಸಿಲುಕಿಸುತ್ತಿವೆ ಎಂದು ಆರೋಪಿಸಿದರು.

ರೈತರ ಸಮಸ್ಯೆಗಳಿಗೆ ಪರಿಹಾರ ಸಿಗಬೇಕಾದರೆ, ರಾಷ್ಟ್ರೀಯ ಪಕ್ಷಗಳಿಂದ ಸಾಧ್ಯವಾಗುವುದಿಲ್ಲ ಎಂದು ತಿಳಿಸಿದರು.

ಭಾರತೀಯ ಕೃಷಿಕ ಸಮಾಜ ಜಿಲ್ಲಾ ಘಟಕದ ಅಧ್ಯಕ್ಷ ಮುನಿವೆಂಕಟರಮಣಪ್ಪ ಮಾತನಾಡಿ, ತೀವ್ರ ಬರಗಾಲ ಮತ್ತು ಸಂಕಷ್ಟದ ನಡುವೆಯು ಲಭ್ಯವಾಗುತ್ತಿರುವ ಅಲ್ಪಪ್ರಮಾಣದ ನೀರನ್ನು ಬಳಕೆ ಮಾಡಿಕೊಂಡು ಬೆಳೆಯುತ್ತಿರುವ ಬೆಳೆಗಳಿಗೆ ಸೂಕ್ತವಾದ ಬೆಲೆಗಳನ್ನು ಒದಗಿಸಿಕೊಡುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ದೂರಿದರು.

ಮಳೆಯ ಕೊರತೆಯಿಂದಾಗಿ ಕಳೆದ ವರ್ಷ ಬಿತ್ತನೆ ಮಾಡಿದ್ದ ಬೆಳೆ ಮೊಳಕೆಯೊಡೆಯದೆ ನಾಶವಾಗಿತ್ತು. ಹಲವಾರು ರೈತರಿಗೆ ಇದುವರೆಗೂ ಪರಿಹಾರದ ಹಣ ಬಂದಿಲ್ಲ ಎಂದರು.

ರೈತರಿಗೆ ವಿತರಣೆ ಮಾಡಿರುವ ಬಿತ್ತನೆ ಬೀಜಗಳು ಕಳಪೆಯಾಗಿರುವ ಕಾರಣ ಹಲವೆಡೆ ರಾಗಿ ಬೆಳೆಗಳು ಸರಿಯಾಗಿ ಆಗದೆ ರೈತರು ಸಂಕಷ್ಟಕ್ಕೆ ಒಳಗಾಗಿದ್ದಾರೆ ಎಂದು ಅಭಿಪ್ರಾಯಪಟ್ಟರು.

ಬೆಳೆಗಳಿಗೆ ವಿಮೆ ಮಾಡಿಸುವಂತೆ ಹೇಳಿರುವ ಸರ್ಕಾರ, ನಷ್ಟವಾಗಿರುವ ಬೆಳೆಗಳಿಗೆ ಸೂಕ್ತ ಪರಿಹಾರ ಒದಗಿಸುವಲ್ಲಿ ವಿಫಲವಾಗಿದೆ. ಆದ್ದರಿಂದ ಜನಪ್ರತಿನಿಧಿಗಳು ಈ ಬಗ್ಗೆ ಗಮನ ಹರಿಸಬೇಕು ಎಂದು ಒತ್ತಾಯಿಸಿದರು.

ಭಾರತೀಯ ಕೃಷಿಕ ಸಮಾಜದ ವತಿಯಿಂದ ನಿಸರ್ಗ ಎಲ್.ಎನ್.ನಾರಾಯಣಸ್ವಾಮಿ ಅವರನ್ನು ಹಸಿರು ಶಾಲು ಹೊದಿಸಿ ಸನ್ಮಾನಿಸಿದರು.

ಡಾ.ವಿ.ನಾ.ರಮೇಶ್, ಜೆ.ಆರ್.ಮುನಿವೀರಣ್ಣ, ಸದಾಖತ್, ಮಂಡಿಬೆಲೆ ವಿಜಯಕುಮಾರ್, ಚಂದ್ರಶೇಖರ ಹಡಪದ್, ಮಹೇಶ್ ಕುಮಾರ್, ಬಿಜ್ಜವಾರ ಆನಂದ್, ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT