ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

12 ಅಧಿಕಾರಿಗಳ ಮನೆ, ಕಚೇರಿ ಮೇಲೆ ಎಸಿಬಿ ದಾಳಿ

Last Updated 4 ಜನವರಿ 2018, 11:00 IST
ಅಕ್ಷರ ಗಾತ್ರ

ಬೆಂಗಳೂರು: ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಸಿದ ಆರೋಪದಲ್ಲಿ ಬಳ್ಳಾರಿಯ ಉಪವಿಭಾಗಾಧಿಕಾರಿ ಸೇರಿ ರಾಜ್ಯದ ವಿವಿಧ ಕಡೆ, ಬೇರೆ ಬೇರೆ ಇಲಾಖೆಗಳ 12 ಅಧಿಕಾರಿಗಳ ಮನೆ ಮತ್ತು ಕಚೇರಿಗಳ ಮೇಲೆ ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಅಧಿಕಾರಿಗಳು ಗುರುವಾರ ದಾಳಿ ನಡೆಸಿದರು.

ಬೆಂಗಳೂರು, ದಾವಣಗೆರೆ, ಗದಗ, ವಿಜಯಪುರ, ಹಾಸನ, ರಾಯಚೂರು, ಶಿವಮೊಗ್ಗ ಜಿಲ್ಲೆಯಲ್ಲಿ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ (ಕೆಪಿಟಿಸಿಎಲ್‌), ಜಿಲ್ಲಾ ಪಂಚಾಯಿತಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳನ್ನು ಗುರಿ ಮಾಡಿ ದಾಳಿ ನಡೆದಿದೆ.

ಈ ಅಧಿಕಾರಿಗಳು ಅಕ್ರಮವಾಗಿ ಆಸ್ತಿ ಗಳಿಸಿರುವ ಕುರಿತು ವಿಶ್ವಾಸಾರ್ಹ ಮೂಲಗಳಿಂದ ಮಾಹಿತಿ ಸಂಗ್ರಹಿಸಿದ ಬಳಿಕ ಏಕಕಾಲಕ್ಕೆ ದಾಳಿ ನಡೆಸಲಾಗಿದೆ. ಆದಾಯ ಮೀರಿ ಸಂಪತ್ತು ಗಳಿಸಿರುವ ಕುರಿತು ಪರಿಶೀಲನೆ ಮುಂದುವರಿದಿದೆ ಎಂದು ಎಸಿಬಿ ಮೂಲಗಳು ತಿಳಿಸಿವೆ.

ನಾಗರಾಜನ್, ಬಿ.ಎಸ್.ಪ್ರಹ್ಲಾದ, ಬಿ.ಟಿ ಕುಮಾರಸ್ವಾಮಿ, ಆರ್.ವಿ ಕಾಂತರಾಜು, ಬಿ.ಎಸ್.ಬಾಲನ್, ಜೆ.ಸಿ ಜಗದೀಶಪ್ಪ,  ವೆಂಕಟೇಶ್, ಅಶೋಕ ಗೌಡಪ್ಪ ಪಾಟೀಲ್, ಸೋಮಪ್ಪ ಟಿ.ಲಮಾಣಿ, ಶ್ರೀಮತಿ. ರೇಖಾ, ನರಸಿಂಹಲು, ಅಮರೇಶ ಬೆಂಚಮರಡಿ ಈ ಅಧಿಕಾರಿಗಳ ಮನೆ ಮತ್ತು ಕಚೇರಿಗಳ ಮೇಲೆ ದಾಳಿ ನಡೆಸಲಾಗಿದೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT