ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲಾಲು ಬೆಂಬಲಿಗರಿಂದ ದೂರವಾಣಿ ಕರೆ: ಶಿಕ್ಷೆ ಪ್ರಮಾಣ ಪ್ರಕಟಿಸುವುದನ್ನು ಮುಂದೂಡಿದ ನ್ಯಾಯಾಲಯ

Last Updated 4 ಜನವರಿ 2018, 12:39 IST
ಅಕ್ಷರ ಗಾತ್ರ

ರಾಂಚಿ: ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್ ಬೆಂಬಲಿಗರಿಂದ ದೂರವಾಣಿ ಕರೆಗಳು ಬಂದಿದ್ದರಿಂದ ಮೇವು ಹಗರಣದ ಅಪರಾಧಿಗಳಿಗೆ ಶಿಕ್ಷೆ ಪ್ರಮಾಣ ಪ್ರಕಟಿಸುವುದನ್ನು ಮುಂದೂಡಲಾಗಿದೆ ಎಂದು ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಮೂರ್ತಿ ಶಿವಪಾಲ್ ಸಿಂಗ್ ಗುರುವಾರ ತಿಳಿಸಿದ್ದಾರೆ.

ಹೀಗಾಗಿ ಸತತ ಎರಡನೇ ದಿನವೂ ಶಿಕ್ಷೆ ಪ್ರಮಾಣ ಪ್ರಕಟವಾಗಿಲ್ಲ. ಶಿಕ್ಷೆ ಪ್ರಮಾಣವನ್ನು ವಿಡಿಯೊ ಕಾನ್ಫರೆನ್ಸ್‌ ಮೂಲಕ ಪ್ರಕಟಿಸಬೇಕೋ ಅಥವಾ ನ್ಯಾಯಾಲಯದಲ್ಲಿ ಪ್ರಕಟಿಸಬೇಕೋ ಎಂಬುದನ್ನು ನಾಳೆ ನಿರ್ಧರಿಸುತ್ತೇನೆ ಎಂದು ಅವರು ತಿಳಿಸಿದ್ದಾರೆ.

ಲಾಲು ಬೆಂಗಲಿಗರಿಂದ ಬಂದ ದೂರವಾಣಿ ಕರೆಗಳ ಬಗ್ಗೆ ನ್ಯಾಯಮೂರ್ತಿ ಶಿವರಾಜ್‌ ಸಿಂಗ್‌ ಹೆಚ್ಚಿನ ಮಾಹಿತಿ ನೀಡಿಲ್ಲ.

ಡಿಸೆಂಬರ್‌ 23ರಂದು ಮೇವು ಹಗರಣದಲ್ಲಿ ಲಾಲು ಪ್ರಸಾದ್ ತಪ್ಪಿತಸ್ಥ ಎಂದು ನ್ಯಾಯಾಲಯ ಘೋಷಿಸಿದ್ದನ್ನು ಟಿವಿ ವಾಹಿನಿಗಳಲ್ಲಿ ಟೀಕಿಸಿದ್ದ ಆರ್‌ಜೆಡಿ ಮತ್ತು ಕಾಂಗ್ರೆಸ್‌ ಮುಖಂಡರಿಗೆ ನ್ಯಾಯಾಲಯ ಬುಧವಾರ ನೊಟೀಸ್‌ ನೀಡಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT