‘ನನ್ನ ಬಲ ಕುಗ್ಗಿಸಲು ಶಾಸಕರ ಖರೀದಿ‘

7

‘ನನ್ನ ಬಲ ಕುಗ್ಗಿಸಲು ಶಾಸಕರ ಖರೀದಿ‘

Published:
Updated:
‘ನನ್ನ ಬಲ ಕುಗ್ಗಿಸಲು ಶಾಸಕರ ಖರೀದಿ‘

ಹೂವಿನಹಡಗಲಿ (ಬಳ್ಳಾರಿ ಜಿಲ್ಲೆ): ‘ಬಳ್ಳಾರಿ ಜಿಲ್ಲೆಯಲ್ಲಿ ನನ್ನ ಬಲ ಕುಗ್ಗಿಸಲು ನಮ್ಮ ಬೆಂಬಲಿಗ ಶಾಸಕರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಖರೀದಿಸಲು ಮುಂದಾಗಿದ್ದಾರೆ’ ಎಂದು ಸಂಸದ ಬಿ.ಶ್ರೀರಾಮುಲು ದೂರಿದರು.

ಪಟ್ಟಣದಲ್ಲಿ ಗುರುವಾರ ಬಿಜೆಪಿ ಪರಿವರ್ತನಾ ಯಾತ್ರೆ ಉದ್ದೇಶಿಸಿ ಮಾತನಾಡಿದ ಅವರು ‘ಮುಖ್ಯಮಂತ್ರಿಯವರ ಈ ಪ್ರಯತ್ನ ಫಲ ನೀಡುವುದಿಲ್ಲ’ ಎಂದರು.

‘ಮುಂಬರುವ ಚುನಾವಣೆಯಲ್ಲಿ ಬಳ್ಳಾರಿ ಜಿಲ್ಲೆಯ ಯಾವ ಕ್ಷೇತ್ರದಲ್ಲೂ ಕಾಂಗ್ರೆಸ್ ಗೆಲ್ಲುವುದಿಲ್ಲ ಎಂಬುದನ್ನು ಬೇಕಾದರೆ ನಾನು ರಕ್ತದಲ್ಲಿ ಬರೆದು ಕೊಡುವೆ. ನಾನು ಪಕ್ಷ ಬಿಟ್ಟು ಹೋಗಿದ್ದರಿಂದ ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿತ್ತು. ಈ ಬಾರಿ ಅದರ ಆಟ ನಡೆಯುವುದಿಲ್ಲ’ ಎಂದು ಹೇಳಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry