ಶಿಕ್ಷಕರ ವರ್ಗಾವಣೆ ಅರ್ಜಿ ಅವಧಿ ವಿಸ್ತರಣೆಗೆ ಮನವಿ

7

ಶಿಕ್ಷಕರ ವರ್ಗಾವಣೆ ಅರ್ಜಿ ಅವಧಿ ವಿಸ್ತರಣೆಗೆ ಮನವಿ

Published:
Updated:

ಬೆಂಗಳೂರು: ಶಿಕ್ಷಕರ ವರ್ಗಾವಣೆ ಅರ್ಜಿ ಸಲ್ಲಿಕೆಗೆ ಅಂತಿಮ ದಿನಾಂಕವನ್ನು ವಿಸ್ತರಿಸಬೇಕು ಎಂದು ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಒತ್ತಾಯಿಸಿದೆ.

‘ಟೀಚರ್ ಟ್ರಾನ್ಸ್‌ಫರ್ ಪ್ರೊಸೆಸಿಂಗ್ ಸಿಸ್ಟಂ’ ಸಾಫ್ಟ್‌ವೇರ್‌ನಲ್ಲಿ ತಾಂತ್ರಿಕ ಸಮಸ್ಯೆಗಳಿದ್ದು ಕೂಡಲೇ ಅವುಗಳನ್ನು ಸರಿಪಡಿಸಬೇಕು. ಅರ್ಜಿಸಲ್ಲಿಸಲು ಇದೇ 10 ಕೊನೆಯ ದಿನವಾಗಿದ್ದು, ಇಷ್ಟು ಕಡಿಮೆ ಅವಧಿಯಲ್ಲಿ ಎಲ್ಲ ಶಿಕ್ಷಕರು ಆನ್‌ಲೈನ್‌ ಮೂಲಕ ಸಲ್ಲಿಸಲು ಸಾಧ್ಯವಿಲ್ಲ. ಅಂತಿಮ ದಿನಾಂಕ ವಿಸ್ತರಿಸಬೇಕು ಎಂದು ಬಸವರಾಜ ಗುರಿಕಾರ ಅವರು ಶಿಕ್ಷಣ ಇಲಾಖೆ ನಿರ್ದೇಶಕರಿಗೆ ಪತ್ರ ಬರೆದು ಆಗ್ರಹಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry