ಸೋಮವಾರ, ಆಗಸ್ಟ್ 3, 2020
25 °C

ಸಾರ್ವಜನಿಕರಿಂದ ಹೆಚ್ಚುವರಿ ಹಣ ಸಂಗ್ರಹ: ಖರ್ಗೆ ಆರೋಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸಾರ್ವಜನಿಕರಿಂದ ಹೆಚ್ಚುವರಿ ಹಣ ಸಂಗ್ರಹ: ಖರ್ಗೆ ಆರೋಪ

ನವದೆಹಲಿ: ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಗಣನೀಯ ಪ್ರಮಾಣದಲ್ಲಿ ಕುಸಿದಿದ್ದರೂ ಕೇಂದ್ರ ಸರ್ಕಾರ ಪೆಟ್ರೋಲ್‌ ಮತ್ತು ಡೀಸೆಲ್‌ ಬೆಲೆಯನ್ನು ಕಡಿಮೆ ಮಾಡದೆ ಸಾರ್ವಜನಿಕರ ಹಣವನ್ನು ಹೆಚ್ಚುವರಿಯಾಗಿ ಸಂಗ್ರಹಿಸುತ್ತಿದೆ ಎಂದು ಕಾಂಗ್ರೆಸ್‌ ಗುಂಪಿನ ನಾಯಕ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದರು.

ಲೋಕಸಭೆಯಲ್ಲಿ ಗುರುವಾರ ಶೂನ್ಯವೇಳೆಯಲ್ಲಿ ಈ ವಿಷಯ ಪ್ರಸ್ತಾಪಿಸಿದ ಅವರು, ನರೇಂದ್ರ ಮೋದಿ ನೇತೃತ್ವದ ಸರ್ಕಾರ ಆಡಳಿತಕ್ಕೆ ಬಂದ ನಂತರ ಕಚ್ಚಾ ತೈಲದ ಬೆಲೆ ಕಡಿಮೆಯಾಗಿದೆ. ಆದರೂ ಕೇಂದ್ರ ಸರ್ಕಾರ ಡೀಸೆಲ್‌ ಮೇಲಿನ ಸುಂಕವನ್ನು ಶೇ 386ರಷ್ಟು, ಪೆಟ್ರೋಲ್‌ ಮೇಲಿನ ಸುಂಕವನ್ನು ಶೇ 126ರಷ್ಟು ಪ್ರಮಾಣದಲ್ಲಿ ಹೆಚ್ಚಿಸುವ ಮೂಲಕ ವಾರ್ಷಿಕ ₹ 1.62 ಲಕ್ಷ ಕೋಟಿ ಸಂಗ್ರಹಿಸುತ್ತಿದೆ ಎಂದು ದೂರಿದರು.

ಸುಂಕ ಸಂಗ್ರಹಿಸುವ ಮೂಲಕವೇ ಸರ್ಕಾರದ ಖಜಾನೆಗೆ ಇದುವರೆಗೆ ₹ 5.52 ಲಕ್ಷ ಕೋಟಿ ಆದಾಯ ಸಂಗ್ರಹವಾಗಿದ್ದರೂ, ಸಾಮಾಜಿಕ ಕಲ್ಯಾಣ ಯೋಜನೆಗಳಿಗೆ ಅನುದಾನ ನೀಡಿಲ್ಲ. ಹೊಸದಾಗಿ ಯಾವುದೇ ರೀತಿಯ ಕಲ್ಯಾಣ ಯೋಜನೆಗಳನ್ನೂ ಜಾರಿಗೊಳಿಸಿಲ್ಲ ಎಂದು ಹೇಳಿದರು.

ಸರ್ಕಾರಕ್ಕೆ ಸಾಕಷ್ಟು ಆದಾಯ ದೊರೆತಿದ್ದರೂ ಜನತೆಗೆ ಯಾವುದೇ ರೀತಿಯ ನೆರವು ದೊರೆತಿಲ್ಲ. ಮುಖ್ಯವಾಗಿ ದಲಿತ ಸಮುದಾಯಗಳ ಅಭಿವೃದ್ಧಿಗೆ ಯೋಜನೆಗಳನ್ನು ರೂಪಿಸಲಾಗಿಲ್ಲ ಎಂದು ಅವರು ಟೀಕಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.