ಬೆಂಗಳೂರು ವಿಮಾನ ನಿಲ್ದಾಣ: ಶೀಘ್ರ ಇನ್ನೊಂದು ರನ್‌ ವೇ

7

ಬೆಂಗಳೂರು ವಿಮಾನ ನಿಲ್ದಾಣ: ಶೀಘ್ರ ಇನ್ನೊಂದು ರನ್‌ ವೇ

Published:
Updated:

ನವದೆಹಲಿ: ಬೆಂಗಳೂರಿನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇನ್ನೊಂದು ರನ್‌ ವೇ ನಿರ್ಮಾಣ ಕಾರ್ಯ ಕೈಗೆತ್ತಿಕೊಳ್ಳಲಾಗಿದ್ದು, ಶೀಘ್ರವೇ ಕಾರ್ಯಾರಂಭ ಮಾಡಲಿದೆ ಎಂದು ವಿಮಾನಯಾನ ಸಚಿವ ಅಶೋಕ್‌ ಗಜಪತಿ ರಾಜು ಸ್ಪಷ್ಟಪಡಿಸಿದರು.

ಲೋಕಸಭೆಯಲ್ಲಿ ಗುರುವಾರ ಬಿಜೆಪಿ ಸದಸ್ಯ ಪಿ.ಸಿ. ಮೋಹನ್‌ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಬೆಂಗಳೂರಿನಲ್ಲಿರುವ ಎಚ್‌ಎಎಲ್‌ ವಿಮಾನ ನಿಲ್ದಾಣವನ್ನು ಸಾರ್ವಜನಿಕ ಬಳಕೆಗೆ ನೀಡುವ ಉದ್ದೇಶ ಸರ್ಕಾರಕ್ಕಿಲ್ಲ ಎಂದರು.

ಇತ್ತೀಚಿನ ದಿನಗಳಲ್ಲಿ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಸಾಕಷ್ಟು ದಟ್ಟಣೆ ಇರುವುದರಿಂದ ಎಚ್‌ಎಎಲ್‌ ವಿಮಾನ ನಿಲ್ದಾಣವನ್ನೂ ಬಳಕೆಗೆ ಮುಕ್ತಗೊಳಿಸಬೇಕಿದೆ ಎಂದು ಮೋಹನ್‌ ಅವರು ಕೋರಿದರು.

ದೇಶದ ಯಾವುದೇ ನಗರದಲ್ಲೂ ಮತ್ತೊಂದು ವಿಮಾನ ನಿಲ್ದಾಣ ಸ್ಥಾಪಿಸುವ ಉದ್ದೇಶ ಸರ್ಕಾರಕ್ಕಿಲ್ಲ. ಬೆಂಗಳೂರಿನಲ್ಲಿರುವ ವಿಮಾನ ನಿಲ್ದಾಣದಲ್ಲಿ ಎರಡನೇ ರನ್‌ ವೇ ಕಾರ್ಯಾರಂಭ ಮಾಡಿದಲ್ಲಿ, ದಟ್ಟಣೆಯ ಸಮಸ್ಯೆಗೆ ಪರಿಹಾರ ದೊರೆಯಲಿದೆ

ಎಂದು ಸಚಿವರು ಉತ್ತರಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry