ಕಾರ್ಯಕರ್ತರ ಮೇಲೆ ಹಲ್ಲೆ: ಬಿಜೆಪಿ ಪ್ರತಿಭಟನೆ

7

ಕಾರ್ಯಕರ್ತರ ಮೇಲೆ ಹಲ್ಲೆ: ಬಿಜೆಪಿ ಪ್ರತಿಭಟನೆ

Published:
Updated:
ಕಾರ್ಯಕರ್ತರ ಮೇಲೆ ಹಲ್ಲೆ: ಬಿಜೆಪಿ ಪ್ರತಿಭಟನೆ

ಹೊಸಕೋಟೆ: ‘ತಾಲ್ಲೂಕಿನಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ನಿರಂತರ ಹಲ್ಲೆ ನಡೆಯುತ್ತಿದೆ. ಪೊಲೀಸರು ಆರೋಪಿಗಳ ವಿರುದ್ಧ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ’ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ಗುರುವಾರ ಪ್ರತಿಭಟನೆ ನಡೆಸಿದರು.

ಮುಖಂಡ ಬಿ.ಎನ್.ಬಚ್ಚೇಗೌಡ ಅವರ ನೇತೃತ್ವದಲ್ಲಿ ಕಾರ್ಯಕರ್ತರು ಬಿಜೆಪಿ ಕಚೇರಿಯಿಂದ ಹೊಸಕೋಟೆ ಠಾಣೆಯವರೆಗೆ ಮೆರವಣಿಗೆ ನಡೆಸಿದರು. ಈ ವೇಳೆ, ‘ಪೊಲೀಸ್‌ ಠಾಣೆಗಳು ಕಾಂಗ್ರೆಸ್‌ ಪಕ್ಷದ ಕಚೇರಿಯಾಗಿವೆ’ ಎಂಬ ಘೋಷಣೆ ಕೂಗಿದರು.

‘ನಮ್ಮ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ ಕಾಂಗ್ರೆಸ್‌ ಕಾರ್ಯಕರ್ತರನ್ನು ಬಂಧಿಸುವ ಬದಲು, ನಮ್ಮವರ ವಿರುದ್ಧವೇ ಸುಳ್ಳು ಪ್ರಕರಣಗಳನ್ನು ದಾಖಲಿಸುತ್ತಿದ್ದಾರೆ’ ಎಂದು ಕಾರ್ಯಕರ್ತರು ದೂರಿದರು.

‘ಪಕ್ಷದ 180 ಕಾರ್ಯಕರ್ತರ ಮೇಲೆ ಗೂಂಡಾ ಕಾಯ್ದೆ ದಾಖಲಿಸಲಾಗಿದೆ. ಕೆಲವು ಪೊಲೀಸ್ ಅಧಿಕಾರಿಗಳು ಬೆದರಿಕೆ ಹಾಕಿ ಕಾಂಗ್ರೆಸ್ ಪರ ಪ್ರಚಾರ ನಡೆಸಲು ಸೂಚಿಸುತ್ತಿದ್ದಾರೆ’ ಎಂದು ಆರೋಪಿಸಿದರು.

‘ನಂದಗುಡಿ ಠಾಣೆಯ ಸಬ್‌ ಇನ್‌ಸ್ಪೆಕ್ಟರ್, ಟಿ.ಎಸ್. ಹಳ್ಳಿ ಠಾಣೆಯ ಸಬ್‌ಇನ್‌ಸ್ಪೆಕ್ಟರ್‌ ಹಾಗೂ ಹೊಸಕೋಟೆ ಇನ್‌ಸ್ಪೆಕ್ಟರ್‌ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿ ರಸ್ತೆತಡೆ ನಡೆಸಿದರು.

ಸ್ಥಳಕ್ಕೆ ಬಂದ ಹೆಚ್ಚುವರಿ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ, ಒಂದು ವಾರದೊಳಗೆ ವಿಚಾರಣೆ ನಡೆಸಿ ಕ್ರಮ ಜರುಗಿಸುವುದಾಗಿ ಭರವಸೆ ನೀಡಿದರು. ನಂತರ ಪ್ರತಿಭಟನೆ ಹಿಂಪಡೆಯಲಾಯಿತು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry