ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವರುಣಾ ಕ್ಷೇತ್ರದ ಅಭಿವೃದ್ಧಿಗೆ ₹ 1600 ಕೋಟಿ : ಡಾ.ಯತೀಂದ್ರ

Last Updated 5 ಜನವರಿ 2018, 5:41 IST
ಅಕ್ಷರ ಗಾತ್ರ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವರುಣಾ ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ₹ 1,600 ಕೋಟಿ ಬಿಡುಗಡೆ ಮಾಡಿ ಅಭಿವೃದ್ಧಿಪಡಿಸಿದ್ದಾರೆ ಎಂದು ವರುಣಾ ಕ್ಷೇತ್ರದ ವಸತಿ ಜಾಗೃತಿ ಸಮಿತಿ ಅಧ್ಯಕ್ಷ ಡಾ.ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು.

ವರುಣಾ ಕ್ಷೇತ್ರದ ಬಿಳಿಗಲಿ ಗ್ರಾಮದ ಲಿಂಗಾಯಿತರ ಬೀದಿಯ ಕಾಂಕ್ರೀಟ್ ರಸ್ತೆ ಮತ್ತು ಚರಂಡಿ ಅಭಿವೃದ್ಧಿಗೆ ₹ 70 ಲಕ್ಷ ವೆಚ್ಚದ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.

ಕ್ಷೇತ್ರದಲ್ಲಿ ಸಾಮಾನ್ಯ ವರ್ಗದ ರಸ್ತೆಗಳ ಅಭಿವೃದ್ಧಿಗೆ ₹ 117 ಕೋಟಿ ಬಿಡುಗಡೆ ಮಾಡಲಾಗಿದೆ. ಶೇ 90ರಷ್ಟು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನರು ವಾಸಿಸುವ ರಸ್ತೆ ಮತ್ತು ಚರಂಡಿ ಕಾಮಗಾರಿಗಳು ಮುಗಿದಿವೆ. ಬಾಕಿ ಉಳಿದಿರುವ ಕಾಮಗಾರಿಗಳನ್ನು ಮಾಡಿಕೊಡುತ್ತೇವೆ ಎಂದರು.

ಸಿದ್ದರಾಮಯ್ಯ ಅವರು ಅಧಿಕಾರ ವಹಿಸಿಕೊಂಡಾಗ ಅಭಿವೃದ್ಧಿಯಲ್ಲಿ ರಾಜ್ಯ 13ನೇ ಸ್ಥಾನದಲ್ಲಿತ್ತು. ಕಳೆದ ನಾಲ್ಕೂವರೆ ವರ್ಷದಲ್ಲಿ ಕರ್ನಾಟಕ ರಾಜ್ಯವನ್ನು ಒಂದನೇ ಸ್ಥಾನಕ್ಕೆ ಮುಖ್ಯಮಂತ್ರಿಗಳು ತಂದು ಇಡೀ ದೇಶಕ್ಕೆ ಅಭಿವೃದ್ಧಿ ಮಾದರಿ ಸೃಷ್ಟಿಸಿದ್ದಾರೆ. ಹಸಿವು ಮುಕ್ತ, ಗುಡಿಸಲುಮುಕ್ತ, ಶೌಚಾಲಯಮುಕ್ತ ರಾಜ್ಯವಾಗಬೇಕೆಂಬುದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕನಸು. ಈಗ ಅದು ನನಸಾಗುತ್ತಿದೆ. ಸಮೃದ್ಧ ಕರ್ನಾಟಕ ನಿರ್ಮಾಣ ಮಾಡಲು ಹೊರಟಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕೈಯನ್ನು ನೀವೆಲ್ಲರೂ ಬಲಪಡಿಸಬೇಕೆಂದು ಕೋರಿದರು.

ಮುಖ್ಯಮಂತ್ರಿಯವರ ಜಂಟಿ ಕಾರ್ಯದರ್ಶಿ ಎಂ.ರಾಮಯ್ಯ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಂಗಸ್ವಾಮಿ, ಕರ್ನಾಟಕ ಗೃಹ ಮಂಡಳಿ ನಿರ್ದೇಶಕ ಮಾಲೇಗೌಡ, ಗ್ರಾ.ಪಂ.ಅಧ್ಯಕ್ಷ ಸೋಮಣ್ಣ, ತಾ.ಪಂ.ಸದಸ್ಯೆ ಲಿಂಗರಾಜಮ್ಮ, ಕೆಪಿಸಿಸಿ ಸದಸ್ಯ ಪುರುಷೋತ್ತಮ್, ಮುಖಂಡರಾದ ಹೊಸಕೋಟೆ ಕುಮಾರ, ಶಿವನಾಗ, ಪದ್ಮಾ, ಕುಮಾರ, ಮಹೇಶ್, ಶಿವಸ್ವಾಮಿ ನಾಗರಾಜ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT