ಉಪ್ಪಾರರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಿ

7

ಉಪ್ಪಾರರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಿ

Published:
Updated:
ಉಪ್ಪಾರರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಿ

ಯಾದಗಿರಿ: ಉಪ್ಪಾರ ಸಮಾಜವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವಂತೆ ಒತ್ತಾಯಿಸಿ ರಾಜ್ಯ ಉಪ್ಪಾರ ಮೀಸಲಾತಿ ಹೋರಾಟ ಸಮಿತಿ ಪದಾಧಿಕಾರಿಗಳು, ಸಮಾಜದ ಮುಖಂಡರು ಗುರುವಾರ ಜಿಲ್ಲಾಡಳಿತ ಭವನದ ಎದುರು ಪ್ರತಿಭಟನೆ ನಡೆಸಿದರು.

‘ಉಪ್ಪಾರ ಸಮಾಜ ಆರ್ಥಿಕವಾಗಿ, ಸಾಮಾಜಿಕ ಹಾಗೂ ಶೈಕ್ಷಣಿಕವಾಗಿ, ರಾಜಕೀಯವಾಗಿ ಹಿಂದುಳಿದಿದೆ. ಆದ್ದರಿಂದ ಉಪ್ಪಾರ ಸಮಾಜಕ್ಕೆ ಮೀಸಲಾತಿ ಕಲ್ಪಿಸುವಂತೆ ರಚನೆಯಾಗಿರುವ ವೆಂಕಟಸ್ವಾಮಿ ಆಯೋಗ, ಚಿನ್ನಪ್ಪರಡ್ಡಿ ಆಯೋಗ, ಹಾವನೂರು ಆಯೋಗ ಸರ್ಕಾರಕ್ಕೆ ವರದಿ ನೀಡಿದ್ದರೂ ಇದುವರೆಗೂ ಸರ್ಕಾರಗಳು ಉಪ್ಪಾರ ಸಮಾಜಕ್ಕೆ ನ್ಯಾಯ ಕೊಟ್ಟಿಲ್ಲ. ಕೂಡಲೇ ಉಪ್ಪಾರ ಸಮಾಜವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಿ ಮೀಸಲಾತಿ ಕಲ್ಪಿಸಬೇಕು’ ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ರಾಜ್ಯ ಉಪ್ಪಾರ ಮೀಸಲಾತಿ ಸಮಿತಿ ಜಿಲ್ಲಾ ಅಧ್ಯಕ್ಷ ರಾಘವೇಂದ್ರ ಸಾಹುಕಾರ ಖಾನಾಪೂರ ಮಾತನಾಡಿ,‘ರಾಜ್ಯದ ಕಾರವಾರ, ಉಡುಪಿ, ಮಂಗಳೂರು ಜಿಲ್ಲೆಗಳಲ್ಲಿನ ಉಪ್ಪಾರ ಸಮುದಾಯವನ್ನು ಪರಿಶಿಷ್ಟ ಜಾತಿ ಪಟ್ಟಿಯಲ್ಲಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಉಪ್ಪಾರ ಸಮಾಜಕ್ಕೆ ಪರಿಶಿಷ್ಟ ಜಾತಿ ಮೀಸಲಾತಿ ಕಲ್ಪಿಸಲಾಗಿದೆ. ಅದರೆ, 70 ವರ್ಷಗಳಿಂದ ನಮ್ಮನ್ನು ಆಳುವ ಸರ್ಕಾರಗಳು ಮಾತ್ರ ಈ ಭಾಗದ ಉಪ್ಪಾರ ಸಮುದಾಯಕ್ಕೆ ನ್ಯಾಯ ಒದಗಿಸಿಲ್ಲ’ ಎಂದು ಆರೋಪಿಸಿದರು.

ರಾಜ್ಯ ಉಪ್ಪಾರ ಮೀಸಲಾತಿ ಸಮಿತಿ ರಾಜ್ಯ ಅಧ್ಯಕ್ಷ ಲಕ್ಷ್ಮಣ ಉಪ್ಪಾರ, ಉಪಾಧ್ಯಕ್ಷ ಅಮರೇಶ ಸಾಹು ಕಟ್ಟಿಮನಿ, ಪ್ರಧಾನ ಕಾರ್ಯದರ್ಶಿ ಸತೀಶ ಮೂರಗೋಡ ಇತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry