ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂವಿಧಾನ ಬದಲಿಸುವ ಮಾತನಾಡುವವರಿಗೆ ಮಾನಸಿಕ ಚಿಕಿತ್ಸೆ ಕೊಡಿಸಬೇಕು: ಅಣ್ಣಾ ಹಜಾರೆ

Last Updated 5 ಜನವರಿ 2018, 8:32 IST
ಅಕ್ಷರ ಗಾತ್ರ

ಬೆಳಗಾವಿ: ಸಂವಿಧಾನ ಬದಲಿಸುವ ಮಾತನಾಡುವವರನ್ನು ಆಸ್ಪತ್ರೆಗೆ ಸೇರಿಸಿ ಮಾನಸಿಕ ಚಿಕಿತ್ಸೆ ಕೊಡಿಸಬೇಕು ಎಂದು ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಅಭಿಪ್ರಾಯಪಟ್ಟಿದ್ದಾರೆ.

ಇಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕೇಂದ್ರ ಸಚಿವ ಅನಂತಕುಮಾರ ಹೆಗಡೆ ವಿರುದ್ಧ ಕಿಡಿ ಕಾರಿದರು.

ಭಾರತದ ವ್ಯವಸ್ಥೆ ನಿಂತಿರುವುದೇ ಸಂವಿಧಾನದ ಆಶಯಗಳ ಮೇಲೆ. ಸಂವಿಧಾನಕ್ಕೆ ಅನುಗುಣವಾಗಿಯೇ ಎಲ್ಲ ಸರ್ಕಾರಗಳು ನಡೆಯುತ್ತಿರುವುದು. ಹಾಗಾಗಿ, ಅದನ್ನು ಬದಲಿಸುವ ಹೇಳಿಕೆಗಳನ್ನು ನೀಡುವುದು ಸರಿಯಲ್ಲ ಎಂದರು.

ಗರಿಷ್ಠ ಮುಖಬೆಲೆಯ ನೋಟುಗಳ ಚಲಾವಣೆ ರದ್ದು ಮಾಡಿದ್ದರಿಂದ ದೇಶದಲ್ಲಿ ಭ್ರಷ್ಟಾಚಾರ ಕಡಿಮೆಯಾಗಿಲ್ಲ. ಭ್ರಷ್ಟಾಚಾರ ಮುಕ್ತ ದೇಶ ನಿರ್ಮಾಣ ಮಾಡುವಲ್ಲಿ ಪ್ರಧಾನಿ ನರೇಂದ್ರ ಮೋದಿ ವಿಫಲವಾಗಿದ್ದಾರೆ ಎಂದು ಆರೋಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT