ಬಾಗಲಕೋಟೆ ನಗರ ಬಂದ್ ನಾಳೆ

7

ಬಾಗಲಕೋಟೆ ನಗರ ಬಂದ್ ನಾಳೆ

Published:
Updated:

ಬಾಗಲಕೋಟೆ: ಮಹಾರಾಷ್ಟ್ರದ ಭೀಮಾ–ಕೋರೆಗಾಂವ್‌ ಯುದ್ಧದ 200ನೇ ವರ್ಷದ ವಿಜಯೋತ್ಸವ ಆಚರಿಸುತ್ತಿದ್ದ ದಲಿತರ ಮೇಲೆ ನಡೆದ ಹಿಂಸಾಚಾರ ಹಾಗೂ ವಿಜಯಪುರ ನಗರದ ದಲಿತ ವಿದ್ಯಾರ್ಥಿನಿ ಅತ್ಯಾಚಾರ ಹಾಗೂ ಕೊಲೆ ಖಂಡಿಸಿ ಜಿಲ್ಲಾ ದಲಿತ ಸಂಘಟನೆಗಳ ಒಕ್ಕೂಟದಿಂದ ಜ.6 ರಂದು ಬಾಗಲಕೋಟೆ ನಗರ ಬಂದ್‌ಗೆ ಕರೆ ನೀಡಲಾಗಿದೆ ಎಂದು ಒಕ್ಕೂಟದ ಪ್ರೇಮನಾಥ ಗರಸಂಗಿ ಹೇಳಿದರು.

ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಾಂತಿಯುತ ಬಂದ್‌ಗೆ ಪ್ರತಿಯೊಬ್ಬರೂ ಸಹಕರಿಸಬೇಕು ಎಂದು ಮನವಿ ಮಾಡಿದರು. ದಲಿತ ಸಂಘರ್ಷ ಸಮಿತಿ (ಎನ್.ಮೂರ್ತಿ ಬಣ), ಬುದ್ಧ ವಿಹಾರ ನಿರ್ಮಾಣ ಸಮಿತಿ, ಸಮತಾ ಸೈನಿಕ ದಳ, ಕರ್ನಾಟಕ ವಾಲ್ಮೀಕಿ ಸಂಘರ್ಷ ಸಮಿತಿ, ಕರ್ನಾಟಕ ಪ್ರದೇಶ ಮಾದಿಗ ಸಂಘಟನೆ ಹಾಗೂ ಚಲವಾದಿ ಸೇವಾ ಸಮಿತಿ ಭಾಗವಹಿಸಲಿವೆ ಎಂದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry