ಪಿಡಿಒ, ಗ್ರಾಮ ಲೆಕ್ಕಾಧಿಕಾರಿ ಅಮಾನತು

7

ಪಿಡಿಒ, ಗ್ರಾಮ ಲೆಕ್ಕಾಧಿಕಾರಿ ಅಮಾನತು

Published:
Updated:

ಬೆಳಗಾವಿ: ಜಿಲ್ಲೆಯ ಅಥಣಿ ತಾಲ್ಲೂಕಿನ ಝುಂಜರವಾಡದಲ್ಲಿ ಕಳೆದ ಏಪ್ರಿಲ್‌ನಲ್ಲಿ ತೆರೆದ ಕೊಳವೆ ಬಾವಿಯೊಳಗೆ ಬಿದ್ದು ಬಾಲಕಿ ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಪ್ರೇಮಲತಾ ಮಾಳಿ ಹಾಗೂ ಗ್ರಾಮ ಲೆಕ್ಕಾಧಿಕಾರಿ ಎ.ಕೆ. ಕನಮಡಿ ಅವರನ್ನು ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆರ್‌.ರಾಮಚಂದ್ರನ್‌ ಶುಕ್ರವಾರ ಅಮಾನತುಗೊಳಿಸಿದ್ದಾರೆ.

‘ಘಟನೆ ಕುರಿತ ತನಿಖಾ ವರದಿ ಇತ್ತೀಚೆಗಷ್ಟೇ ಬಂದಿದೆ. ಅದರಲ್ಲಿ ಇವರಿಬ್ಬರೂ ಕರ್ತವ್ಯಲೋಪ ಎಸಗಿರುವುದು ಸಾಬೀತಾಗಿದೆ. ಹೀಗಾಗಿ ಅವರನ್ನು ಅಮಾನತು ಮಾಡಲಾಗಿದೆ’ ಎಂದರು.

ಶಂಕರ ಹಿಪ್ಪರಗಿ ಎಂಬುವರ ಕೊಳವೆ ಬಾವಿಗೆ ಕಾವೇರಿ ಮಾದರ (6) ಬಿದ್ದು ಮೃತಪಟ್ಟಿದ್ದಳು. ತೆರೆದ ಕೊಳವೆ ಬಾವಿಗಳನ್ನು ಮುಚ್ಚಿಸಲು ಈ ಅಧಿಕಾರಿಗಳು ಕ್ರಮ ತೆಗೆದುಕೊಂಡಿರಲಿಲ್ಲ ಎಂದು ವರದಿಯಲ್ಲಿ ಹೇಳಲಾಗಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry