ಹಿಂದೆ ಸರಿದ ಮೇರಿ ಕೋಮ್‌

5

ಹಿಂದೆ ಸರಿದ ಮೇರಿ ಕೋಮ್‌

Published:
Updated:
ಹಿಂದೆ ಸರಿದ ಮೇರಿ ಕೋಮ್‌

ರೋಹ್ಟಕ್‌: ಕಾಮನ್‌ವೆಲ್ತ್ ಗೇಮ್ಸ್ ಮತ್ತು ಏಷ್ಯನ್‌ ಗೇಮ್ಸ್‌ಗೆ ಹೆಬ್ಬಾಗಿಲು ಎಂದೇ ಪರಿಗಣಿಸಲಾಗಿರುವ ರಾಷ್ಟ್ರೀಯ ಮಹಿಳಾ ಬಾಕ್ಸಿಂಗ್ ಚಾಂಪಿಯನ್‌ಷಿಪ್‌ ಶನಿವಾರ ಇಲ್ಲಿ ಆರಂಭವಾಗಲಿದೆ.

ಐದು ಬಾರಿ ವಿಶ್ವ ಚಾಂಪಿಯನ್ ಆಗಿರುವ ಮೇರಿ ಕೋಮ್‌ ಚಾಂಪಿಯನ್‌ಷಿಪ್‌ನಲ್ಲಿ ಪಾಲ್ಗೊಳ್ಳುವುದಿಲ್ಲ. ಎಲ್.ಸರಿತಾ ದೇವಿ ಮತ್ತು ಸರಜೂಬಾಲ ದೇವಿ ಗಮನ ಸೆಳೆಯಲಿದ್ದಾರೆ.

ಒಂದು ವಾರ ನಡೆಯಲಿರುವ ಚಾಂಪಿಯನ್‌ಷಿಪ್‌ನಲ್ಲಿ 300ಕ್ಕೂ ಹೆಚ್ಚು ಬಾಕ್ಸರ್‌ಗಳು ಕಣಕ್ಕೆ ಇಳಿಯಲಿದ್ದಾರೆ. ಕಾಮನ್‌ವೆಲ್ತ್‌ ಗೇಮ್ಸ್ ಮತ್ತು ಏಷ್ಯನ್ ಗೇಮ್ಸ್‌ಗೆ ಆಯ್ಕೆ ಇಲ್ಲೇ ನಡೆಯಲಿದೆ ಎಂದು ಭಾರತ ಬಾಕ್ಸಿಂಗ್ ಫೆಡರೇಷನ್‌ ತಿಳಿಸಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry