ಬುಧವಾರ, ಆಗಸ್ಟ್ 5, 2020
26 °C

ಸರ್ಕಾರದಿಂದಲೇ ಸಾಲುಮರದ ತಿಮ್ಮಕ್ಕನ ವೈದ್ಯಕೀಯ ವೆಚ್ಚ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸರ್ಕಾರದಿಂದಲೇ ಸಾಲುಮರದ ತಿಮ್ಮಕ್ಕನ ವೈದ್ಯಕೀಯ ವೆಚ್ಚ

ಬೆಂಗಳೂರು: ಸಾಲು ಮರದ ತಿಮ್ಮಕ್ಕ ಅವರ ಜೀವಿತಾವಧಿಯ ವೈದ್ಯಕೀಯ ವೆಚ್ಚ ಭರಿಸಲು ಸರ್ಕಾರ ತೀರ್ಮಾನಿಸಿದೆ.

ರಾಜ್ಯದ ಯಾವುದೇ ಖಾಸಗಿ ಅಥವಾ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದರೂ ಆ ವೆಚ್ಚವನ್ನು ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಪಾವತಿಸಲಾಗುವುದು ಎಂದು ಮುಖ್ಯಮಂತ್ರಿ ಸಚಿವಾಲಯ ಹೊರಡಿಸಿರುವ ಆದೇಶದಲ್ಲಿ ತಿಳಿಸಿದೆ.

ತಿಮ್ಮಕ್ಕ ಆಸ್ಪತ್ರೆಗೆ ದಾಖಲಾದ ಬಳಿಕ ಆ ಆಸ್ಪತ್ರೆಯ ಆಡಳಿತ ವರ್ಗ ಮುಖ್ಯಮಂತ್ರಿ ಕಚೇರಿಗೆ ಮಾಹಿತಿ ನೀಡಬೇಕು. ಬಳಿಕ ಚಿಕಿತ್ಸಾ ವೆಚ್ಚದ ವಿವರ ಹಾಗೂ ವೈದ್ಯಕೀಯ ವರದಿ ಕಳುಹಿಸಿದರೆ ಆಸ್ಪತ್ರೆಗೆ ನೇರವಾಗಿ ಹಣ ಪಾವತಿಸಲಾಗುವುದು ಎಂದೂ ಆದೇಶದಲ್ಲಿ ಸ್ಪಷ್ಟಪಡಿಸಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.