ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾಬೀತು ಮಾಡಿ ತೋರಿಸಲಿ: ಬಿ.ಎಸ್.ಯಡಿಯೂರಪ್ಪ ಸವಾಲು

Last Updated 5 ಜನವರಿ 2018, 19:30 IST
ಅಕ್ಷರ ಗಾತ್ರ

ಬಳ್ಳಾರಿ: ‘ಬಿಜೆಪಿ ಮತ್ತು ಪಿಎಫ್ಐ ಜೊತೆ ಗುಪ್ತ ಸಂಬಂಧ ಏರ್ಪಟ್ಟಿದೆ ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ. 24 ಗಂಟೆಯೊಳಗೆ ಅವರು ಅದನ್ನು ಸಾಬೀತು ಮಾಡಲಿ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸವಾಲು ಹಾಕಿದರು.

ದೀಪಕ್ ರಾವ್‌ ಕೊಲೆ ಪ್ರಕರಣದಲ್ಲಿ ಬಿಜೆಪಿಯ ಅಲ್ಪಸಂಖ್ಯಾತ ಮೋರ್ಚಾದ ಮೂವರು ಮುಖಂಡರ ಕೈವಾಡವಿದೆ ಎಂಬುದೂ ಸುಳ್ಳು ಎಂದು ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಕೊಲೆ ಪ್ರಕರಣಕ್ಕೆ ರಾಜ್ಯ ಸರ್ಕಾರ ನ್ಯಾಯ ದೊರಕಿಸುವುದಿಲ್ಲವೆಂದೇ ರಾಷ್ಟ್ರೀಯ ತನಿಖಾ ಸಂಸ್ಥೆಗೆ ವಹಿಸಬೇಕೆಂದು ರಾಜ್ಯದ ಸಂಸದರು ಕೇಂದ್ರವನ್ನು ಆಗ್ರಹಿಸಿದ್ದಾರೆ ಎಂದರು.

*
‘ನವಾಝ್ ಬಿಜೆಪಿ ಕಾರ್ಯಕರ್ತನಲ್ಲ’
ಮಂಗಳೂರು:
ದೀಪಕ್‌ ಹತ್ಯೆ ಪ್ರಕರಣ ಪ್ರಮುಖ ಆರೋಪಿ ಪಿಂಕಿ ನವಾಝ್‌ ಬಿಜೆಪಿ ಕಾರ್ಯಕರ್ತನಲ್ಲ. ಅವನಿಗೂ ಪಕ್ಷಕ್ಕೂ ಸಂಬಂಧವಿಲ್ಲ ಎಂದು ಬಿಜೆಪಿ ಮುಖಂಡರು ಸ್ಪಷ್ಟಪಡಿಸಿದ್ದಾರೆ.

ಗುರುವಾರ ಪತ್ರಿಕಾಗೋಷ್ಠಿ ನಡೆಸಿದ್ದ ಶಾಸಕ ಬಾವ ಹಾಗೂ ಎಸ್‌ಡಿಪಿಐ ಮುಖಂಡರು, ಆರೋಪಿ ಪಿಂಕಿ ನವಾಝ್‌ ಬಿಜೆಪಿ ಕಾರ್ಯಕರ್ತನಾಗಿದ್ದು, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪರವಾಗಿ ಕೆಲಸ ಮಾಡಿದ್ದ ಎಂದು ಆರೋಪಿಸಿದ್ದರು. ಈ ವಿಷಯ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗೆ ಗ್ರಾಸವಾಗಿತ್ತು.

ಇದಕ್ಕೆ ಶುಕ್ರವಾರ ಸ್ಪಷ್ಟನೆ ನೀಡಿದ, ಬಿಜೆಪಿ ಹಿಂದುಳಿದ ಮೋರ್ಚಾ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಸತ್ಯಜಿತ್‌ ಸುರತ್ಕಲ್‌, ಬಿಜೆಪಿ ಅಲ್ಪ
ಸಂಖ್ಯಾತ ಮೋರ್ಚಾ ಉತ್ತರ ಘಟಕದ ಅಧ್ಯಕ್ಷ ಶಹಾನವಾಝ್‌, ‘ಪಿಂಕಿ ನವಾಝ್‌ ನಮ್ಮ ಪಕ್ಷದ ಕಾರ್ಯಕರ್ತನಲ್ಲ. ಶಾಸಕ ಬಾವ ಅವರ ಆರೋಪ ನಿರಾಧಾರ. ಈ ಆರೋಪವನ್ನು ಸಾಬೀತುಪಡಿಸಬೇಕು. ಇಲ್ಲದೇ ಇದ್ದರೆ, ಶಾಸಕರ ಮನೆ ಎದುರು ಧರಣಿ ನಡೆಸಲಾಗುವುದು' ಎಂದು ಎಚ್ಚರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT