ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಶೋಧನಾ ಸಮಿತಿ ಗುಣಮಟ್ಟ ತಗ್ಗಿಸುತ್ತಿರುವ ಸರ್ಕಾರ’

Last Updated 5 ಜನವರಿ 2018, 19:30 IST
ಅಕ್ಷರ ಗಾತ್ರ

ಬೆಂಗಳೂರು: ವಿಶ್ವವಿದ್ಯಾಲಯಗಳ ಕುಲಪತಿ ಶೋಧನಾ ಸಮಿತಿಗೆ ಅರ್ಹತೆ, ನಿಪುಣತೆ ಇಲ್ಲದವರನ್ನೂ ಸದಸ್ಯರನ್ನಾಗಿ ನೇಮಿಸುವ ಮೂಲಕ ಸಮಿತಿಗಳ ಗುಣಮಟ್ಟವನ್ನು ಸರ್ಕಾರವೇ ತಗ್ಗಿಸುತ್ತಿದೆಎಂದು ವಿಶ್ರಾಂತ ಕುಲಪತಿಗಳ ವೇದಿಕೆ ಬೇಸರ ವ್ಯಕ್ತಪಡಿಸಿದೆ.

ಕುಲಪತಿ ಹುದ್ದೆಗೆ ಆಯ್ಕೆ ಮಾಡಬೇಕಾದರೆ ಸಮಿತಿಯಲ್ಲಿ ಇರುವವರು ಆ ಹುದ್ದೆಯಲ್ಲಿ ಈಗಾಗಲೇ ಕಾರ್ಯನಿರ್ವಹಿಸಿದವರು ಆಗಿರಬೇಕು ಅಥವಾ ತತ್ಸಮಾನ ಹುದ್ದೆಯಲ್ಲಿರಬೇಕು.ಅದಕ್ಕಿಂತ ಕೆಳಗಿನ ಹುದ್ದೆಯಲ್ಲಿರುವವರು ಮತ್ತು ಶೈಕ್ಷಣಿಕ ಕ್ಷೇತ್ರಕ್ಕೆ ಸಂಬಂಧವೇ ಇಲ್ಲದವರು ಉತ್ತಮ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಹೇಗೆ ಸಾಧ್ಯ? ಸಮಿತಿ ಸದಸ್ಯರ ಶೈಕ್ಷಣಿಕ ಮತ್ತು ಆಡಳಿತಾತ್ಮಕ ಕಾರ್ಯಗಳನ್ನೂ ಗಮನಿಸಿ ನೇಮಕ ಮಾಡಬೇಕು ಎಂದು ವೇದಿಕೆ ಕಾರ್ಯದರ್ಶಿ ಡಾ. ಆರ್.ಎನ್. ಶ್ರೀನಿವಾಸಗೌಡ ಸರ್ಕಾರವನ್ನು ಆಗ್ರಹಿಸಿದ್ದಾರೆ.

‘ಶಿವಮೊಗ್ಗ  ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯದ ಕುಲಪತಿ ಶೋಧನಾ ಸಮಿತಿಗೆ ನಿವೃತ್ತ ಐಎಎಸ್ ಅಧಿಕಾರಿಯನ್ನು ಅಧ್ಯಕ್ಷರನ್ನಾಗಿ ಮಾಡಲಾಗಿದೆ. ಅಲ್ಲದೆ, ಜುನಾಗಡ ವಿಶ್ವವಿದ್ಯಾಲಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಡೀನ್ ಒಬ್ಬರನ್ನು ಸಮಿತಿಯ ಸದಸ್ಯರನ್ನಗಿ ಮಾಡಲಾಗಿದೆ. ಈ ರೀತಿಯಬೆಳವಣಿಗೆ ಖೇದಕರ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT