ಬುಧವಾರ, ಆಗಸ್ಟ್ 5, 2020
23 °C

ಪಕ್ಷಿಗಳಿಗಾಗಿ ನೀರಿನ ತೊಟ್ಟಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಪಕ್ಷಿಗಳಿಗಾಗಿ ನೀರಿನ ತೊಟ್ಟಿ

ಬೆಂಗಳೂರು: ಬಿಬಿಎಂಪಿ ಕೇಂದ್ರ ಕಚೇರಿಯ ಆವರಣದಲ್ಲಿ ಪಕ್ಷಿಗಳ ನೀರಿನ ದಾಹ ನೀಗಿಸುವ ಉದ್ದೇಶದಿಂದ ನಾಲ್ಕು ಸಣ್ಣ ತೊಟ್ಟಿಗಳನ್ನು ಅಳವಡಿಸಲಾಗಿದೆ.

ನಗರದ ಕೇಂದ್ರ ಭಾಗದ 50 ಕಡೆಗಳಲ್ಲಿ ತೊಟ್ಟಿಗಳನ್ನು ವಾರದೊಳಗೆ ಅಳವಡಿಸುವಂತೆ ತೋಟಗಾರಿಕೆ ವಿಭಾಗದ ಅಧಿಕಾರಿಗಳಿಗೆ ಮೇಯರ್‌ ಆರ್‌.ಸಂಪತ್‌ ರಾಜ್‌ ಸೂಚನೆ ನೀಡಿದರು.

ಈ ತೊಟ್ಟಿಗಳಿಗೆ ನಿತ್ಯ ನೀರು ತುಂಬಿಸುವ ಕೆಲಸವನ್ನು ವಲಯದ ಸಿಬ್ಬಂದಿಗೆ ವಹಿಸಬೇಕು, ಇವುಗಳಿಗೆ ಸ್ವಯಂಚಾಲಿತ ಶುದ್ಧೀಕರಣ ಯಂತ್ರದ ಮೂಲಕ ನೀರು ಪೂರೈಸಬೇಕು ಎಂದು ಸೂಚಿಸಿದರು.

ನೀರಿನ ಅಭಾವದಿಂದ ಪಕ್ಷಿ ಸಂಕುಲ ನಾಶವಾಗುತ್ತಿದೆ. ಇದರಿಂದ ಪರಿಸರದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ. ಪಾಲಿಕೆಯ ಎಲ್ಲ ಸದಸ್ಯರು ಇದಕ್ಕೆ ಸಹಕಾರ ನೀಡಬೇಕು ಎಂದು ತಿಳಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.