ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋಟಿ ಪ್ರಕರಣ, ₹112 ಕೋಟಿ ದಂಡ

Last Updated 5 ಜನವರಿ 2018, 19:42 IST
ಅಕ್ಷರ ಗಾತ್ರ

ಬೆಂಗಳೂರು: ಸಂಚಾರ ನಿಯಮ ಉಲ್ಲಂಘನೆ ಸಂಬಂಧ ಪೊಲೀಸರು, 2017ರಲ್ಲಿ 1 ಕೋಟಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ₹112 ಕೋಟಿ ದಂಡ ಸಂಗ್ರಹಿಸಿದ್ದಾರೆ.

ನಗರದ ಸಂಚಾರ ಪೊಲೀಸರು, 2017ರ ಜನವರಿಯಿಂದ ಡಿಸೆಂಬರ್‌ ವರೆಗೆ ದಾಖಲಾದ ಪ್ರಕರಣಗಳ ಅಂಕಿ–ಅಂಶವನ್ನು ಶುಕ್ರವಾರ ಬಿಡುಗಡೆ ಮಾಡಿದ್ದಾರೆ. 2016ಕ್ಕಿಂತ 2017ರಲ್ಲಿ ಪ್ರಕರಣಗಳ ಸಂಖ್ಯೆ ಶೇ 40ರಷ್ಟು ಹೆಚ್ಚಾಗಿದೆ. ದಂಡ ಸಂಗ್ರಹದ ಪ್ರಮಾಣವೂ ಶೇ 75ರಷ್ಟು ಜಾಸ್ತಿ ಆಗಿದೆ.

ಮೋಟಾರು ವಾಹನಗಳ ಕಾಯ್ದೆ ಅಡಿ 68.94 ಲಕ್ಷ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ₹89.40 ಕೋಟಿ ದಂಡ ಸಂಗ್ರಹಿಸಲಾಗಿದೆ. ನೋ ಪಾರ್ಕಿಂಗ್‌ ಸ್ಥಳಗಳಲ್ಲಿ ನಿಲ್ಲಿಸಿದ್ದ ವಾಹನಗಳ ಟೋಯಿಂಗ್‌ ಸಂಬಂಧ 2.70 ಲಕ್ಷ ಪ್ರಕರಣ ದಾಖಲಿಸಿಕೊಂಡು, ₹21.33 ಕೋಟಿ ದಂಡ ಸಂಗ್ರಹಿಸಲಾಗಿದೆ.

ಕ್ಯಾಮೆರಾ ಮೂಲಕ 30.27 ಲಕ್ಷ ನಿಯಮ ಉಲ್ಲಂಘನೆ ಪ್ರಕರಣಗಳನ್ನು ಪತ್ತೆ ಹಚ್ಚಲಾಗಿದ್ದು, ಅದರಿಂದ ₹1.64 ಕೋಟಿ ದಂಡ ಬಂದಿದೆ.

ಕುಡಿದು ವಾಹನ ಚಲಾಯಿಸಿದ್ದ 73 ಸಾವಿರ ಚಾಲಕರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಹೆಲ್ಮೆಟ್‌ ಧರಿಸದಿದ್ದಕ್ಕೆ 20.19 ಲಕ್ಷ ದ್ವಿಚಕ್ರ ವಾಹನಗಳ ಸವಾರರಿಗೆ ದಂಡ ವಿಧಿಸಲಾಗಿದೆ.

5,065 ಅಪಘಾತ, 641 ಸಾವು: ನಗರದಲ್ಲಿ 2017ರಲ್ಲಿ 5,065 ಅಪಘಾತಗಳು ಸಂಭವಿಸಿವೆ. ಅದರಲ್ಲಿ 641 ಮಂದಿ ಮೃತಪಟ್ಟಿದ್ದು, 4,251 ಮಂದಿ ಗಾಯಗೊಂಡಿದ್ದಾರೆ.

‘2016ರಲ್ಲಿ 7,506 ಅಪಘಾತಗಳು ಸಂಭವಿಸಿ, 793 ಮಂದಿ ಮೃತಪಟ್ಟಿದ್ದರು. ಈ ವರ್ಷ ಅಪಾಯಕಾರಿ ಸ್ಥಳಗಳಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದರಿಂದ ಅಪಘಾತಗಳ ಸಂಖ್ಯೆ ಇಳಿಕೆಯಾಗಿದೆ’ ಎಂದು ಹೆಚ್ಚುವರಿ ‍ಪೊಲೀಸ್ ಕಮಿಷನರ್‌ (ಸಂಚಾರ) ಆರ್‌.ಹಿತೇಂದ್ರ
ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT