ಗುರುವಾರ , ಜೂಲೈ 9, 2020
24 °C

ನಕಲಿ ದಾಖಲೆ ನೀಡಿದ ಆರೋಪ; ಖರೋಲ ವಿರುದ್ಧ ದೂರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನಕಲಿ ದಾಖಲೆ ನೀಡಿದ ಆರೋಪ; ಖರೋಲ ವಿರುದ್ಧ ದೂರು

ಬೆಂಗಳೂರು: ‘ಐಎಎಸ್‌ ಅಧಿಕಾರಿ ಪ್ರದೀಪ್‌ ಸಿಂಗ್‌ ಖರೋಲ ಅವರು ಕೇಂದ್ರ ಸೇವೆಗೆ ನಿಯೋಜನೆಗೊಳ್ಳಲು ನಕಲಿ ದಾಖಲೆಗಳನ್ನು ನೀಡಿದ್ದಾರೆ’ ಎಂದು ಆರೋಪಿಸಿ ಕನಕಪುರದ ಆರ್‌ಟಿಐ ಕಾರ್ಯಕರ್ತ ದಿನೇಶ್‌ ಕಲ್ಲಹಳ್ಳಿ ಅವರು ವಿಧಾನಸೌಧ ಪೊಲೀಸರಿಗೆ ದೂರು ನೀಡಿದ್ದಾರೆ.

‘ಬೆಂಗಳೂರು ಮೆಟ್ರೊ ರೈಲು ನಿಗಮದ (ಬಿಎಂಆರ್‌ಸಿಎಲ್‌) ವ್ಯವಸ್ಥಾಪಕ ನಿರ್ದೇಶಕರಾಗಿ ಕೆಲಸ ಮಾಡಿದ್ದ ಖರೋಲ, ಸದ್ಯ ಏರ್‌ ಇಂಡಿಯಾ ಮುಖ್ಯಸ್ಥರಾಗಿದ್ದಾರೆ. ರಾಜ್ಯ ಸೇವೆಯಿಂದ ಕೇಂದ್ರ ಸರ್ಕಾರದ ಸೇವೆಗೆ ಹೋಗುವ ಅಧಿಕಾರಿಯ ವಿರುದ್ಧ ಯಾವುದೇ ಕ್ರಿಮಿನಲ್‌ ಮೊಕದ್ದಮೆ ಇರಬಾರದೆಂಬ ನಿಯಮವಿದೆ. ಆದರೆ, ಖರೋಲ ಅವರ ಮೇಲೆ 4ನೇ ಎಸಿಎಂಎಂ ನ್ಯಾಯಾಲಯದಲ್ಲಿ ಪ್ರಕರಣವಿದೆ (ಸಂಖ್ಯೆ 151/17). ಅಷ್ಟಾದರೂ ಅವರು ಕೇಂದ್ರ ಸೇವೆಗೆ ಹೋಗಿದ್ದಾರೆ’ ಎಂದು ದಿನೇಶ್‌ ದೂರಿದ್ದಾರೆ.

‘ಯಾವುದೇ ಪ್ರಕರಣಗಳಿಲ್ಲವೆಂದು ಅವರು ದಾಖಲೆ ನೀಡಿದ್ದಾರೆ. ಅದಕ್ಕೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಸುಭಾಷ್‌ ಚಂದ್ರ ಖುಂಟಿಅ ಹಾಗೂ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (ಡಿಪಿಎಆರ್‌) ಕಾರ್ಯದರ್ಶಿ ಅನಿಲ್ ಕುಮಾರ್ ಸಹಕಾರ ನೀಡಿದ್ದಾರೆ. ಈ ಮೂವರ ವಿರುದ್ಧ ತನಿಖೆ ನಡೆಸಬೇಕು’ ಎಂದು  ಅವರು ಕೋರಿದ್ದಾರೆ.

ವಿಧಾನಸೌಧ ಪೊಲೀಸರು, ‘ದೂರು ದಾಖಲಿಸಿಕೊಳ್ಳುವ ಬಗ್ಗೆ ಕಾನೂನು ತಜ್ಞರ ಅಭಿಪ್ರಾಯ ಪಡೆಯುತ್ತಿದ್ದೇವೆ’ ಎಂದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.