ಶನಿವಾರ, ಜೂಲೈ 4, 2020
21 °C

ಜಮ್ಮು ಕಾಶ್ಮೀರ: ಸೋಪೊರ್‍‍ನಲ್ಲಿ ಐಇಡಿ ಸ್ಫೋಟ; ನಾಲ್ವರು ಪೊಲೀಸರು ಸಾವು

ಪಿಟಿಐ Updated:

ಅಕ್ಷರ ಗಾತ್ರ : | |

ಜಮ್ಮು ಕಾಶ್ಮೀರ: ಸೋಪೊರ್‍‍ನಲ್ಲಿ ಐಇಡಿ ಸ್ಫೋಟ; ನಾಲ್ವರು ಪೊಲೀಸರು ಸಾವು

ಜಮ್ಮು ಕಾಶ್ಮೀರ: ಇಲ್ಲಿನ ಬಾರಾಮುಲ್ಲಾ ಜಿಲ್ಲೆಯ ಸೋಪೊರ್‍‍ನಲ್ಲಿ  ಸುಧಾರಿತ ಸ್ಫೋಟಕ ಸಾಧನ (ಐಇಡಿ) ಸ್ಫೋಟಗೊಂಡು ನಾಲ್ವರು ಪೊಲೀಸರು ಸಾವಿಗೀಡಾಗಿದ್ದಾರೆ ಎಂದು ಪಿಟಿಐ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಶನಿವಾರ ಈ ಘಟನೆ ಸಂಭವಿಸಿದ್ದು,ಉಗ್ರರು ಈ ಸ್ಫೋಟ ನಡೆಸಿದ್ದಾರೆ ಎಂದು ಶಂಕಿಸಲಾಗಿದೆ. ಘಟನೆಯಲ್ಲಿ ಹಲವಾರು ಮಂದಿಗೆ ಗಾಯಗಳಾಗಿವೆ.

ಘಟನೆಯನ್ನು ಖಂಡಿಸಿ ಟ್ವೀಟ್ ಮಾಡಿರುವ ಕಾಶ್ಮೀರದ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ, ಸೋಪೊರ್‍‍‌ನಲ್ಲಿ ನಡೆದ ಐಇಡಿ ಸ್ಫೋಟದಲ್ಲಿ ನಾಲ್ವರು ಪೊಲೀಸರು ಮೃತರಾಗಿದ್ದಾರೆ ಎಂದು ತಿಳಿದು ಬೇಸರವಾಗಿದೆ ಎಂದಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.