ಸಿ.ಎಂ ಕಾರ್ಯಕ್ರಮ ಸ್ಥಳ ಪರಿಶೀಲನೆ

7

ಸಿ.ಎಂ ಕಾರ್ಯಕ್ರಮ ಸ್ಥಳ ಪರಿಶೀಲನೆ

Published:
Updated:

ಚಾಮರಾಜನಗರ: ತಾಲ್ಲೂಕಿನ ನಾಗವಳ್ಳಿ ಗ್ರಾಮದ ಹೊರವಲಯದಲ್ಲಿ ಮುಖ್ಯಮಂತ್ರಿ ಕಾರ್ಯಕ್ರಮಕ್ಕೆ ಸಜ್ಜುಗೊಳ್ಳುತ್ತಿರುವ ವೇದಿಕೆಯ ಸ್ಥಳಕ್ಕೆ ಶುಕ್ರವಾರ ಶಾಸಕ ಸಿ. ಪುಟ್ಟರಂಗಶೆಟ್ಟಿ ಭೇಟಿ ನೀಡಿ ಪರಿಶೀಲಿಸಿದರು.

ಬಳಿಕ ಮಾತನಾಡಿದ ಅವರು, ‘ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಲು ಜ. 10ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲಾ ಪ್ರವಾಸ ಕೈಗೊಂಡಿದ್ದು, ಸಕಲ ಸಿದ್ಧತೆ ಕೈಗೊಳ್ಳಲಾಗಿದೆ’ ಎಂದು ತಿಳಿಸಿದರು.

ಬಹುನಿರೀಕ್ಷಿತ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗೆ ಮುಖ್ಯಮಂತ್ರಿಗಳು ಚಾಲನೆ ನೀಡಲಿದ್ದಾರೆ. ಈ ಮೂಲಕ 166 ಹಳ್ಳಿಗಳಿಗೆ ಶುದ್ಧ ಕುಡಿಯುವ ನೀರನ್ನು ಸರಬರಾಜು ಮಾಡುವ ಘಟಕ ಲೋಕಾರ್ಪಣೆಗೊಳ್ಳಲಿದೆ ಎಂದು ಹೇಳಿದರು.

ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಆರ್. ಉಮೇಶ್, ನಗರಸಭೆ ಉಪಾಧ್ಯಕ್ಷ ಆರ್.ಎಂ.ರಾಜಪ್ಪ, ಸದಸ್ಯರಾದ ಚೆಂಗುಮಣಿ, ಬಂಗಾರು, ಬಗರ್‌ಹುಕುಂ ಸಾಗುವಳಿ ಸಮಿತಿ ಸದಸ್ಯ ಹೆಬ್ಬಸೂರು ರಂಗಸ್ವಾಮಿ, ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಚಿಕ್ಕಮಹದೇವ್, ಮುಖಂಡರಾದ ನಾಗಯ್ಯ, ಸೋಮೇಶ್ವರ್, ರಾಜು, ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ರಮೇಶ್ ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry