ಸೋಮವಾರ, ಜೂಲೈ 6, 2020
21 °C

ಇದೇ 10ರಂದು ಹೋರಾಟಗಾರರ ಸಭೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಇದೇ 10ರಂದು ಹೋರಾಟಗಾರರ ಸಭೆ

ರಾಮನಗರ: ಬೆಂಗಳೂರಿನಲ್ಲಿ ಇದೇ 10ರಂದು ಕನ್ನಡಪರ ಸಂಘಟನೆಗಳ ಮುಖಂಡರು ಹಾಗೂ ರೈತರ ಸಭೆ ಆಯೋಜಿಸಲಾಗಿದೆ‌. ಮಹದಾಯಿ ವಿವಾದ ಬಗೆಹರಿಸದ ರಾಜಕೀಯ ಪಕ್ಷಗಳ ನಡೆ ವಿರೋಧಿಸಿ ಬಂದ್ ಆಚರಿಸುವ ಸಂಬಂಧ ಅಂದು ನಿರ್ಧಾರ ಕೈಗೊಳ್ಳಲಾಗುವುದು ಎಂದು ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜು ತಿಳಿಸಿದರು.

ಇಲ್ಲಿನ ಐಜೂರು ವೃತ್ತದಲ್ಲಿ ಶನಿವಾರ ಮೇಕೆದಾಟು ಹಾಗೂ ಮಹದಾಯಿ ಯೋಜನೆ ಜಾರಿಗೆ ಆಗ್ರಹಿಸಿ ನಡೆದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು‌. ಮಹದಾಯಿ ವಿಚಾರದಲ್ಲಿ ಬಿ‌.ಎಸ್‌‌. ಯಡಿಯೂರಪ್ಪ ದೊಡ್ಡ ನಾಟಕದ ಮೂಲಕ ಜನರನ್ನು ಯಾಮಾರಿಸುತ್ತಿದ್ದಾರೆ. ಪ್ರಧಾನಿ ಮೋದಿ ಇನ್ನಾದರೂ ಮಧ್ಯ ಪ್ರವೇಶಿಸಿ ಸಮಸ್ಯೆ ಇತ್ಯರ್ಥಪಡಿಸಬೇಕು ಎಂದು ಆಗ್ರಹಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.