ಗುರುವಾರ , ಜೂಲೈ 9, 2020
27 °C

100 ಯೂನಿಟ್ ರಕ್ತ ಸಂಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಗುಡಿಬಂಡೆ: ತಾಲ್ಲೂಕಿನ ಕೊಂಡರೆಡ್ಡಿಹಳ್ಳಿ ಕಿತ್ತೂರು ರಾಣಿ ಚನ್ನಮ್ಮ ಹಾಗೂ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಉಚಿತ ಊಟ, ವಸತಿ, ಸಮವಸ್ತ್ರ, ಪಠ್ಯಪುಸ್ತಕದೊಂದಿಗೆ ಶಿಕ್ಷಣ ನೀಡಲಾಗುತ್ತದೆ.

ಅರ್ಜಿ ಸಲ್ಲಿಸಲು ಜ.13 ಕೊನೆಯ ದಿನ. ಫೆ 18ರಂದು ಬೆಳಿಗ್ಗೆ 11ರಿಂದ 1ರ ವರೆಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದೆ. ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ, ಸಮಾಜ ಕಲ್ಯಾಣ ಇಲಾಖೆ ಮತ್ತು ಕೊಂಡರೆಡ್ಡಿಹಳ್ಳಿ ಕಿತ್ತೂರುರಾಣಿ ಚನ್ನಮ್ಮ ವಸತಿ ಶಾಲೆಯಲ್ಲಿ ಅರ್ಜಿ ಪಡೆಯಬಹುದು. ವಿವರಗಳಿಗೆ ಮೊಬೈಲ್ 7338629349 ಸಂಪರ್ಕಿಸಬಹುದು.

ಚಿಕ್ಕಬಳ್ಳಾಪುರ: ತಾಲ್ಲೂಕಿನ ಹೊಸಹುಡ್ಯದಲ್ಲಿ ಶುಕ್ರವಾರ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಎಂ.ಮುನಿರಾಜು ಅವರ ಸ್ಮರಣಾರ್ಥ ರಕ್ತದಾನ ಮತ್ತು ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಲಾಗಿತ್ತು.

ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಜಿಲ್ಲಾ ಶಾಖೆ, ಕೆ. ಬಿ. ಪಿಳ್ಳಪ್ಪ ಸ್ಮಾರಕ ದತ್ತಿ ಸಹಯೋಗದಲ್ಲಿ ಈ ಶಿಬಿರ ಆಯೋಜಿಸಲಾಗಿತ್ತು. ಶಿಬಿರದಲ್ಲಿ 100 ಯೂನಿಟ್ ರಕ್ತ ಸಂಗ್ರಹವಾಗಿದೆ.

ಶಿಬಿರದಲ್ಲಿ 256 ಜನರಿಗೆ ರಕ್ತದೊತ್ತಡ, 124 ಮಂದಿಗೆ ದಂತ ಪರೀಕ್ಷೆ , 25 ಜನರಿಗೆ ದಂತ ಚಿಕಿತ್ಸೆ, 146 ಮಂದಿಗೆ ಕಣ್ಣಿನ ಪರೀಕ್ಷೆ ಮಾಡಲಾಯಿತು. ಕಣ್ಣಿನ ಸಮಸ್ಯೆ ಇರುವ 16 ಜನರಿಗೆ ಉಚಿತ ಶಸ್ತ್ರಚಿಕಿತ್ಸೆ ಮಾಡಿಸಲು ನೋಂದಣಿ ಮಾಡಿಸಿಕೊಳ್ಳಲಾಯಿತು.

ರೆಡ್‌ಕ್ರಾಸ್ ಜಿಲ್ಲಾ ಶಾಖೆ ಉಪಾಧ್ಯಕ್ಷ ಡಾ.ಕೆ.ಪಿ. ಶ್ರೀನಿವಾಸಮೂರ್ತಿ ಮತ್ತು ಪಿಳ್ಳಪ್ಪ ಸ್ಮಾರಕ ದತ್ತಿ ಕಾರ್ಯದರ್ಶಿ ಕೆ ಪಿ ಬಚ್ಚೇಗೌಡ ಅವರು ರಕ್ತದಾನಿಗಳಿಗೆ ಪ್ರಮಾಣಪತ್ರ ವಿತರಿಸಿದರು.

ಜಿಲ್ಲಾ ಪಂಚಾಯಿತಿ ಸದಸ್ಯರಾದ ಕೆ.ಎಂ.ಮುನೇಗೌಡ, ಕೆ.ಸಿ.ರಾಜಕಾಂತ್, ತಾಲ್ಲೂಕು ಪಂಚಾಯಿತಿ ಸದಸ್ಯ ಕುಮಾರ್, ಮುಖಂಡರಾದ ಕೆ ಪಿ ಚನ್ನಬೈರೇಗೌಡ, ಡಾ. ಪ್ರಶಾಂತ್.ಎಸ್.ಮೂರ್ತಿ, ನಾರಾಯಣಸ್ವಾಮಿ, ವೆಂಕಟೇಶ್, ಮಂಜು, ಗಂಗರಾಜು, ಕೊಂಡೆನಹಳ್ಳಿ ನಾರಾಯಣಸ್ವಾಮಿ, ಕೆ .ಬಿ.ಸಂದೀಪ್, ಕೆ.ಆರ್.ರೆಡ್ಡಿ ಶಿಬಿರದಲ್ಲಿ ಭಾಗವಹಿಸಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.