‘ಪರಿವರ್ತನೆ ಆಗಬೇಕಿರುವುದು ಬಿಜೆಪಿ ನಾಯಕರು’

7

‘ಪರಿವರ್ತನೆ ಆಗಬೇಕಿರುವುದು ಬಿಜೆಪಿ ನಾಯಕರು’

Published:
Updated:

ದಾವಣಗೆರೆ: ರಾಜ್ಯದಲ್ಲಿ ಬಿಜೆಪಿ ಪರಿವರ್ತನಾ ಯಾತ್ರೆ ಮಾಡುತ್ತಿರುವುದು ಹಾಸ್ಯಾಸ್ಪದ. ಯಡಿಯೂರಪ್ಪ, ಶೋಭಾ ಕರಂದ್ಲಾಜೆ, ಪ್ರತಾಪ ಸಿಂಹ ಹಾಗೂ ಅನಂತಕುಮಾರ್‌ ಹೆಗಡೆ ಅಂಥವರು ಮೊದಲು ಪರಿವರ್ತನೆಯಾಗಬೇಕು ಎಂದು ಕೆಪಿಸಿಸಿ ಕಾರ್ಯದರ್ಶಿ ಡಿ.ಬಸವರಾಜ್‌ ವ್ಯಂಗ್ಯವಾಡಿದರು.

ಹಿಂದೆ ಬಿಜೆಪಿ ಆಡಳಿತದಲ್ಲಿ ನಡೆದ ಭ್ರಷ್ಟಾಚಾರ ಗಳನ್ನು ಜನರು ಕಂಡಿದ್ದಾರೆ. ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿಯಲು ಬಿಜೆಪಿ ನಾಯಕರು ಕನಸು ಕಾಣುತ್ತಿದ್ದಾರೆ. ಅದು ಸಾಧ್ಯವಿಲ್ಲ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಅವರು ವಾಗ್ದಾಳಿ ನಡೆಸಿದರು.

ರಾಜ್ಯದ ಇತಿಹಾಸದಲ್ಲಿ ಭ್ರಷ್ಟಾಚಾರ ಎಸಗಿ ಜೈಲಿಗೆ ಹೋದ ಮುಖ್ಯಮಂತ್ರಿ ಇದ್ದರೆ ಯಡಿಯೂರಪ್ಪ ಮಾತ್ರ. ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಹಲವು ಮುಖಂಡರು ಈಗಾಗಲೇ ಜೈಲಿಗೆ ಹೋಗಿ ಬಂದಿದ್ದಾರೆ. ಇಂಥವರೆಲ್ಲ ಈಗ ಪರಿವರ್ತನಾ ಯಾತ್ರೆ ಮಾಡುತ್ತಿದ್ದಾರೆ ಎಂದರು.

ರಾಜ್ಯದಲ್ಲಿ 156 ಪರಿವರ್ತನಾ ಯಾತ್ರೆಗಳನ್ನು ನಡೆಸಿ 1.5 ಕೋಟಿ ಜನರನ್ನು ತಲುಪಿರುವುದಾಗಿ ಯಡಿಯೂರಪ್ಪ ಸುಳ್ಳು ಹೇಳುತ್ತಿದ್ದಾರೆ. ಕೆಲ ಯಾತ್ರೆಯಲ್ಲಿ 10 ಸಾವಿರ ಜನರೂ ಸೇರಿರಲಿಲ್ಲ ಎಂದು ಕುಟುಕಿದರು.

ಉತ್ತರ ಪ್ರದೇಶ ಅಭಿವೃದ್ಧಿಯಲ್ಲಿ ಹಿಂದುಳಿದೆ. ಆರೋಗ್ಯ ವ್ಯವಸ್ಥೆ ಶೋಚನೀಯವಾಗಿದೆ. ಅಂತಹ ರಾಜ್ಯದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರಂಥ ಕೋಮುವಾದಿಗಳನ್ನು ರಾಜ್ಯದಲ್ಲಿ ಗಲಭೆ ಸೃಷ್ಟಿಸಲು ಕರೆಸುತ್ತಿದ್ದಾರೆ.

ಸರಣಿ ರೈತರ ಆತ್ಮಹತ್ಯೆಗಳು ನಡೆದಾಗ ರಾಜ್ಯಕ್ಕೆ ಕಾಲಿಡದ ಪ್ರಧಾನಿ ನರೇಂದ್ರ ಮೋದಿ ಚುನಾವಣೆ ಹತ್ತಿರವಾಗುತ್ತಿದ್ದಂತೆ ಬರಲು ಸಿದ್ಧರಾಗಿದ್ದಾರೆ ಎಂದರು. ಸುದ್ದಿಗೋಷ್ಠಿಯಲ್ಲಿ ಅಲ್ಲಾವಲಿ ಘಾಜಿಖಾನ್‌, ಜಿಯಾವುಲ್ಲ, ಇರ್ಫಾನ್‌, ಫಾರೂಖ್‌ ಅವರೂ ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry