ಗುರುವಾರ , ಜೂಲೈ 9, 2020
26 °C

ಕೊಲೆ ಖಂಡಿಸಿ ಕೋಲಿ ಸಮಾಜದಿಂದ ಪ್ರತಿಭಟನಾ ಮೆರವಣಿಗೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಜೇವರ್ಗಿ: ತಾಲ್ಲೂಕಿನಲ್ಲಿ ಕೋಲಿ ಸಮಾಜದ ಜನರ ಮೇಲೆ ನಡೆಯುತ್ತಿರುವ ಕೊಲೆ, ದೌರ್ಜನ್ಯ ಪ್ರಕರಣಗಳನ್ನು ಖಂಡಿಸಿ ಅಖಿಲ ಭಾರತ ಕೋಲಿ ಸಮಾಜ ತಾಲ್ಲೂಕು ಘಟಕದ ವತಿಯಿಂದ ಪಟ್ಟಣದ ಮಿನಿ ವಿಧಾನಸೌಧ ಎದುರು ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.

‘ದೌರ್ಜನ್ಯ ಪ್ರಕರಣಗಳನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಬೇಕು. ಮಾವನೂರ ಗ್ರಾಮದ ಕೋಲಿ ಸಮಾಜದ ಮುಖಂಡ ಶಿವರುದ್ರಪ್ಪ ಹನ್ನೂರ್ ಅವರನ್ನು ಕೊಲೆಗೈದ ಆರೋಪಿಗಳನ್ನು ಕೂಡಲೇ ಬಂಧಿಸಬೇಕು. ಕೋಲಿ ಸಮಾಜದ ಮುಖಂಡರು, ಅಮಾಯಕರ ಮೇಲೆ ದಾಖಲಿಸಿದ ಪ್ರಕರಣಗಳನ್ನು ಹಿಂದಕ್ಕೆ ಪಡೆಯಬೇಕು’ ಎಂದು ಸಮಾಜದ ಮುಖಂಡರು ಆಗ್ರಹಿಸಿದರು.

‘ಅಹಿತಕರ ಘಟನೆಗಳಲ್ಲಿ ಜೀವ ಕಳೆದುಕೊಂಡಿರುವ ವ್ಯಕ್ತಿಗಳ ಕುಟುಂಬ ವರ್ಗದವರಿಗೆ ರಾಜ್ಯ ಸರ್ಕಾರ ತಲಾ ₹10 ಲಕ್ಷ ಪರಿಹಾರ ನೀಡಬೇಕು’ ಎಂದು ಒತ್ತಾಯಿಸಿದರು.

ಪ್ರತಿಭಟನೆಗೂ ಮುಂಚೆ ಪಟ್ಟಣದ ನಿಜಶರಣ ಅಂಬಿಗರ ಚೌಡಯ್ಯ ಸಮುದಾಯ ಭವನದಿಂದ ಮಿನಿ ವಿಧಾ ನಸೌಧವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು. ನಂತರ ತಹಶೀಲ್ದಾರ್ ಬಸವಲಿಂಗಪ್ಪ ನಾಯಕೋಡಿ ಅವರ ಮುಖಾಂತರ ರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಸಿದರು.

ಕೋಲಿ ಸಮಾಜದ ತಾಲ್ಲೂಕು ಘಟಕದ ಅಧ್ಯಕ್ಷ ರೇವಣಸಿದ್ದಪ್ಪಗೌಡ ಕಮಾನಮನಿ, ಜಿ.ಪಂ.ಮಾಜಿ ಸದಸ್ಯೆ ಶೋಭಾ ಬಾಣಿ, ಮುಖಂಡರಾದ ಎಸ್.ಕೆ.ಹೇರೂರ, ಶಂಕರ ಕಟ್ಟಿಸಂಗಾವಿ, ಸುಭಾಷ ಮುಕ್ಕಾ ಹರವಾಳ, ಶಿವಲಿಂಗಪ್ಪ ಕಿನ್ನೂರ್, ಭೂತಾಳಿ ದಾವಜಿ, ಭೀಮರಾಯ ಜನಿವಾರ, ವಿಠಲ್ ಕವಾಲ್ದಾರ್, ಜಗದೀಶ ತಳವಾರ, ಮೈಲಾರಿ ಗುಡೂರ, ರಾಜೇಂದ್ರ ರಾಜವಾಳ, ಗಂಗಣ್ಣ ಗುಡೂರ, ದತ್ತು ಹರನೂರ, ಶಿವಣ್ಣ ಬೆಣ್ಣೂರ್, ಶಿವಾಜಿ ಹಣಮಂತಗೋಳ, ದೇವಿಂದ್ರ ಚಿಗರಳ್ಳಿ, ಮರೆಪ್ಪ ಕೋಳಕೂರ, ಮೈಲಾರಿ ಬಣಮಿ, ಉಮಾಕಾಂತ ಮಾವನೂರ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.