ಗುರುವಾರ , ಜೂಲೈ 2, 2020
23 °C
ಪುರಸಭೆ ಅಧ್ಯಕ್ಷ ಸ್ಥಾನದ ಚುನಾವಣೆ ಗೊಂದಲ

ಶಾಸಕ ಬಾಲಕೃಷ್ಣ ಕಾರಿನ ಮೇಲೆ ಚಪ್ಪಲಿ ಎಸೆತ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಾಸಕ ಬಾಲಕೃಷ್ಣ ಕಾರಿನ ಮೇಲೆ ಚಪ್ಪಲಿ ಎಸೆತ

ಮಾಗಡಿ: ಇಲ್ಲಿನ ಪುರಸಭೆ ಅಧ್ಯಕ್ಷ ಸ್ಥಾನಕ್ಕೆ ಶನಿವಾರ ನಡೆದ ಚುನಾವಣೆಯಲ್ಲಿ ದಲಿತ ಅಭ್ಯರ್ಥಿಗೆ ಬೆಂಬಲ ನೀಡಲಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ ಸ್ಥಳೀಯರು ಶಾಸಕ ಎಚ್‌.ಸಿ. ಬಾಲಕೃಷ್ಣ ಅವರ ಕಾರಿಗೆ ಚಪ್ಪಲಿ ತೂರಿ, ಅರೆಬೆತ್ತಲೆ ಪ್ರತಿಭಟನೆ ನಡೆಸಿದರು.

23 ಸದಸ್ಯ ಬಲದ ಮಾಗಡಿ ಪುರಸಭೆಯ ಗದ್ದುಗೆ ಏರಲು ಕಾಂಗ್ರೆಸ್‌ ಹಾಗೂ ಜೆಡಿಎಸ್‌ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿತ್ತು. ಕಾಂಗ್ರೆಸ್‌ನಿಂದ ಮಾದಿಗ ಸಮುದಾಯಕ್ಕೆ ಸೇರಿದ ಸುಶೀಲಾ ರಂಗಹನುಮಯ್ಯ ಎಂಬುವರು ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿದ್ದರು. ಪಕ್ಷೇತರರಾಗಿ ಗೆದ್ದು ಕಾಂಗ್ರೆಸ್ ಜೊತೆ ಗುರುತಿಸಿಕೊಂಡಿದ್ದ ಎಚ್‌.ಆರ್. ಮಂಜುನಾಥ್‌ ಅವರ ಹೆಸರೂ ಚಾಲ್ತಿಯಲ್ಲಿತ್ತು. ಸಚಿವ ಎಚ್.ಎಂ. ರೇವಣ್ಣ ಅವರ ಬೆಂಬಲದಿಂದ ಕುರುಬ ಸಮುದಾಯಕ್ಕೆ ಸೇರಿದ ಮಂಜುನಾಥ್‌ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದರು.

ಈ ಬೆಳವಣಿಗೆಯಿಂದ ಸಿಟ್ಟಿಗೆದ್ದ ರಂಗಹನುಮಯ್ಯ ಹಾಗೂ ಅವರ ಬೆಂಬಲಿಗರು ಬಾಲಕೃಷ್ಣ ಅವರ ಕಾರಿನ ಮೇಲೆ ಚಪ್ಪಲಿ ತೂರಿದರು. ಪುರಸಭೆಯ ಮುಂಭಾಗ ಅರೆಬೆತ್ತಲೆ ಪ್ರತಿಭಟನೆಯನ್ನೂ ನಡೆಸಿದರು. ಶಾಸಕ ಬಾಲಕೃಷ್ಣ ನುಡಿದಂತೆ ನಡೆದುಕೊಳ್ಳದೇ ಮೋಸ ಮಾಡಿದ್ದಾರೆ ಎಂದು ಆರೋಪಿಸಿದ ಪ್ರತಿಭಟನಾಕಾರರು ಸಚಿವರಾದ ಡಿ.ಕೆ. ಶಿವಕುಮಾರ್, ಎಚ್‌.ಎಂ. ರೇವಣ್ಣ ಹಾಗೂ ಸಂಸದ ಡಿ.ಕೆ. ಸುರೇಶ್‌ ವಿರುದ್ಧವೂ ಘೋಷಣೆ ಕೂಗಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.