ಬುಧವಾರ, ಜೂಲೈ 8, 2020
29 °C

ಡಿಡಿಪಿಐ ಬಸವರಾಜು ಅಮಾನತು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿಕ್ಕಮಗಳೂರು: ಕರ್ತವ್ಯ ಲೋಪಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಆಡಳಿತ ವಿಭಾಗದ ಉಪನಿರ್ದೇಶಕ (ಡಿಡಿಪಿಐ) ಎನ್‌.ಜಿ. ಬಸವರಾಜು ಅವರನ್ನು ಅಮಾನತುಗೊಳಿಸಿ ಶಿಕ್ಷಣ ಇಲಾಖೆ ಅಧೀನ ಕಾರ್ಯದರ್ಶಿ ಟಿ.ಡಿ.ನಾಗೇಂದ್ರ ಅವರು ಆದೇಶ ಹೊರಡಿಸಿದ್ದಾರೆ.

ತರೀಕೆರೆ ತಾಲ್ಲೂಕಿನ ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿ (ಬಿಆರ್‌ಸಿ) ವಿಜಯಕುಮಾರ್‌ ಅವರಿಗೆ ಚಿಕ್ಕಮಗಳೂರು, ತರೀಕೆರೆ ತಾಲ್ಲೂಕುಗಳ ಹೆಚ್ಚುವರಿ ಪ್ರಭಾರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಹೊಣೆ ವಹಿಸಿ ಆದೇಶ ನೀಡಲಾಗಿದೆ. ವಿಜಯಕುಮಾರ್‌ ಅವರಿಗೆ ಅನುಮತಿ ನೀಡುವಂತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು ಮತ್ತು ಜಿಲ್ಲಾಧಿಕಾರಿ ಸೂಚನೆ ನೀಡಿದ್ದರೂ ಆದೇಶ ಪಾಲನೆ ಮಾಡದೆ ಡಿಡಿಪಿಐ ದುರ್ನಡತೆ ತೋರಿದ್ದಾರೆ. ಬಸವರಾಜು ಅವರು ಕರ್ತವ್ಯ ನಿರ್ಲಕ್ಷ್ಯ ಎಸಗಿರುವುದು ಮೇಲ್ನೋಟಕ್ಕೆ ಕಂಡುಬಂದಿದ್ದು, ಕರ್ತವ್ಯದಲ್ಲಿ ಮುಂದುವರಿಸಿದರೆ ಸಾಕ್ಷ್ಯ ನಾಶಪಡಿಸುವ ಸಾಧ್ಯತೆ ಇದೆ. ಹೀಗಾಗಿ, ವಿಚಾರಣೆ ಕಾಯ್ದಿರಿಸಿ ತಕ್ಷಣದಿಂದ ಜಾರಿಗೆ ಬರುವಂತೆ ಅವರನ್ನು ಸೇವೆಯಿಂದ ಅಮಾನತಗೊಳಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.