ಇಸ್ಲಾಮಾಬಾದ್: ಪಾಕಿಸ್ತಾನ್ ತೆಹ್ರಿಕ್-ಎ-ಇನ್ಸಾಫ್ (ಪಿಟಿಐ) ಮುಖ್ಯಸ್ಥ ಹಾಗೂ ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಲಾಹೋರ್‌ನಲ್ಲಿ ರಹಸ್ಯವಾಗಿ ಮದುವೆಯಾಗಿದ್ದಾರೆ ಎಂದು ವರದಿಯಾಗಿದೆ. ತಮ್ಮ ಆಧ್ಯಾತ್ಮಿಕ ಮಾರ್ಗದರ್ಶಕಿಯನ್ನು ಮದುವೆ ಮಾಡಿಕೊಂಡಿದ್ದಾರೆ ಎಂದು ಪಾಕಿಸ್ತಾನ್ ಡೈಲಿ ವರದಿ ಮಾಡಿದೆ. ಆದರೆ, ಅವರ ಪಕ್ಷದ ನಾಯಕರು ಈ ವರದಿಯನ್ನು ಅಲ್ಲಗಳೆದಿದ್ದಾರೆ.

ಜನವರಿ 1ರಂದು ರಾತ್ರಿ ಮದುವೆ ಮಾಡಿಕೊಳ್ಳುವ ಮೂಲಕ 2018ರ ಹೊಸ ವರ್ಷವನ್ನು ಇಮ್ರಾನ್ ಖಾನ್ ಲಾಹೋರ್‌ನಲ್ಲಿ ಸ್ವಾಗತಿಸಿದ್ದಾರೆ ಮರುದಿನ ಅಲ್ಲಿಂದಲೇ ನೇರವಾಗಿ ಇಸ್ಲಾಮಾಬಾದಿಗೆ ಭಯೋತ್ಪಾದನಾ ನಿಗ್ರಹ ಕೋರ್ಟ್‌ಗೆ ಹಾಜರಾಗಿದ್ದರು. ಅಲ್ಲಿ ಅವರಿಗೆ ಜಾಮೀನು ಸಿಕ್ಕಿತು ಎಂದು ವರದಿ ತಿಳಿಸಿದೆ.

ಪಿಟಿಐ ಕೋರ್ ಸಮಿತಿ ಸದಸ್ಯ ಮುಫ್ತಿ ಸಯೀದ್ ಮದುವೆ ನೆರವೇರಿಸಿದ್ದಾರೆ ಎಂದು ವರದಿಯಾಗಿದೆ. ಇಮ್ರಾನ್ ಖಾನ್ 1995ರ ಮೇ 16ರಂದು ಜೆಮಿಮಾ ಗೋಲ್ಡ್‌ಸ್ಮಿತ್ ಅವರನ್ನು ಮದುವೆಯಾಗಿದ್ದರು. 2004ರಲ್ಲಿ ವಿಚ್ಛೇದನ ಪಡೆದಿದ್ದರು. ನಂತರ ರೆಹಂ ಖಾನ್ ಅವರನ್ನು ಮದುವೆಯಾಗಿದ್ದು. ಅದು ಹತ್ತೇ ತಿಂಗಳಲ್ಲಿ ಮುರಿದುಬಿದ್ದಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.