ಬುಧವಾರ, ಜೂಲೈ 8, 2020
23 °C

ಅತ್ಯಾಚಾರಿಗಳಿಗೆ ಗಲ್ಲುಶಿಕ್ಷೆ: ಕಾನೂನು ರೂಪಿಸಲು ಉತ್ತರಾಖಂಡ ಹೈಕೋರ್ಟ್‌ ಸಲಹೆ

ಪಿಟಿಐ Updated:

ಅಕ್ಷರ ಗಾತ್ರ : | |

ನೈನಿತಾಲ್‌: ಹದಿನೈದು ವರ್ಷದ ಒಳಗಿನ ಹೆಣ್ಣುಮಕ್ಕಳ ಮೇಲೆ ಅತ್ಯಾಚಾರ ಎಸಗುವವರಿಗೆ ಗಲ್ಲುಶಿಕ್ಷೆ ವಿಧಿಸುವ ಕಾನೂನು ರೂಪಿಸುವಂತೆ ಉತ್ತರಾಖಂಡ ಹೈಕೋರ್ಟ್‌ ಅಲ್ಲಿನ ಸರ್ಕಾರಕ್ಕೆ ಸಲಹೆ ನೀಡಿದೆ.

2016ರ ಜೂನ್‌ನಲ್ಲಿ ನಡೆದಿದ್ದ ಎಂಟು ವರ್ಷದ ಬಾಲಕಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬರಿಗೆ ಕೆಳ ನ್ಯಾಯಾಲಯ ನೀಡಿದ್ದ ಗಲ್ಲುಶಿಕ್ಷೆಯನ್ನು ಎತ್ತಿಹಿಡಿದ ವಿಭಾಗೀಯ ಪೀಠದ ನ್ಯಾಯಮೂರ್ತಿಗಳಾದ ರಾಜೀವ್‌ ಶರ್ಮಾ ಮತ್ತು ಅಶೋಕ್‌ ಸಿಂಗ್‌ ಅವರು ಈ ಸೂಚನೆ ನೀಡಿದ್ದಾರೆ.

‘ಕಠಿಣ ಕಾನೂನು ಜಾರಿಯಿಂದ ಹೆಣ್ಣುಮಕ್ಕಳ ಮೇಲಿನ ಅತ್ಯಾಚಾರದಂತಹ ಕೃತ್ಯಗಳನ್ನು ತಡೆಯಲು ಸಾಧ್ಯವಾಗಲಿದೆ’ ಎಂದು  ಅಭಿಪ್ರಾಯಪಟ್ಟಿದ್ದಾರೆ.

‘ಮಕ್ಕಳ ಮೇಲಿನ ಅಪರಾಧ ಕುರಿತ ರಾಷ್ಟ್ರೀಯ ಅಪರಾಧ ದಳದ ಅಂಕಿಅಂಶಗಳ ಪ್ರಕಾರ 2014ರಲ್ಲಿ 489, 2015ರಲ್ಲಿ 635 ಮತ್ತು 2016ರಲ್ಲಿ 676 ಇಂತಹ ಪ್ರಕರಣಗಳು ದಾಖಲಾಗಿವೆ. ವರ್ಷದಿಂದ ವರ್ಷಕ್ಕೆ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ಕಠಿಣ ಕಾನೂನು ರೂಪಿಸುವುದು ಅತ್ಯಗತ್ಯ’ ಎಂದು ಪ್ರತಿಪಾದಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.