ಮಂಗಳವಾರ, ಆಗಸ್ಟ್ 4, 2020
22 °C

ಬೀದಿಬದಿ ವ್ಯಾಪಾರಿಗಳಿಗೆ ಸ್ಮಾರ್ಟ್ ಕಾರ್ಡ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ನಗರದಲ್ಲಿರುವ ಬೀದಿ ಬದಿ ವ್ಯಾಪಾರಿಗಳಿಗೆ ಮೈಕ್ರೊ ಚಿಪ್‌ ಒಳಗೊಂಡ ಗುರುತಿನ ಚೀಟಿಗಳನ್ನು (ಸ್ಮಾರ್ಟ್‌ ಕಾರ್ಡ್) ಇದೇ 25ರೊಳಗೆ ವಿತರಿಸಲು ಬಿಬಿಎಂಪಿ ಸಿದ್ಧತೆ ನಡೆಸಿದೆ.

ಪಾಲಿಕೆಯ ಅಧಿಕಾರಿಗಳು ‘ದೀನದಯಾಳ್‌ ಅಂತ್ಯೋದಯ ಯೋಜನೆ’ಯ ರಾಷ್ಟ್ರೀಯ ನಗರ ಜೀವನೋಪಾಯಗಳ ಅಭಿಯಾನದಡಿ ಸಮೀಕ್ಷೆ ನಡೆಸಿ 25 ಸಾವಿರ ಬೀದಿಬದಿ ವ್ಯಾಪಾರಿಗಳನ್ನು ಗುರುತಿಸಿದ್ದಾರೆ.

ಸಾಮಾನ್ಯ ಗುರುತಿನ ಚೀಟಿಯನ್ನು ನಕಲು ಮಾಡುವ ಸಾಧ್ಯತೆ ಇರುವುದರಿಂದ ಸ್ಮಾರ್ಟ್‌ ಕಾರ್ಡ್‌ ನೀಡಲು ನಿರ್ಧರಿಸಲಾಗಿದೆ ಎಂದು ಪಾಲಿಕೆಯ ಅಧಿಕಾರಿಯೊಬ್ಬರು ತಿಳಿಸಿದರು.

1.5 ಲಕ್ಷ ಬೀದಿಬದಿ ವ್ಯಾಪಾರಿಗಳು: ಪಾಲಿಕೆಯ ವ್ಯಾಪ್ತಿಯಲ್ಲಿ 1.5 ಲಕ್ಷ ಬೀದಿಬದಿ ವ್ಯಾಪಾರಿಗಳಿದ್ದಾರೆ. ಸಮೀಕ್ಷೆಯ ಬಗ್ಗೆ ಬಹಳಷ್ಟು ವ್ಯಾಪಾರಿಗಳಿಗೆ ಮಾಹಿತಿ ಸಿಕ್ಕಿಲ್ಲ. ಹೀಗಾಗಿ ಸಮೀಕ್ಷೆಯಲ್ಲಿ ಪಾಲ್ಗೊಂಡಿರಲಿಲ್ಲ. ಕೆ.ಆರ್.ಮಾರುಕಟ್ಟೆ, ಗಾಂಧಿನಗರ ಹಾಗೂ ಮಲ್ಲೇಶ್ವರ ಭಾಗಗಳಲ್ಲಿ ವ್ಯಾಪಾರಿಗಳ ಸಮೀಕ್ಷೆ ನಡೆಸಲು ಜನಪ್ರತಿನಿಧಿಗಳು ಅವಕಾಶ ನೀಡಿಲ್ಲ. ಅವರ ಮನವೊಲಿಸಿ ಸಮೀಕ್ಷೆ ನಡೆಸಬೇಕು ಎಂದು ಬೀದಿಬದಿ ವ್ಯಾಪಾರಿಗಳ ಒಕ್ಕೂಟದ ಅಧ್ಯಕ್ಷ ರಂಗಸ್ವಾಮಿ ಒತ್ತಾಯಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.